Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೇಸು, “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಜೆಜುನ್ ತೆಕಾ, “ಮಿಯಾ ಯೆಯ್ ಪತರ್ ತೊ ಝಿತ್ತೊ ರ್‍ಹಾವ್ಕ್ ಪಾಜೆ, ಮನುನ್ ರ್‍ಹಾಲ್ಯಾರ್, ತೆ ಸಗ್ಳೆ ತುಕಾ ಕಾಯ್? ಮಾಜ್ಯಾ ಫಾಟ್ನಾ ಯೆ!” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:22
20 ತಿಳಿವುಗಳ ಹೋಲಿಕೆ  

ಯೇಸು ಅವರಿಗೆ, “ನಿಮಗೆ ನಿಜ ನಿಜವಾಗಿ ಹೇಳುತ್ತೇನೆ, ಇಲ್ಲಿ ನಿಂತಿರುವವರೊಳಗೆ ಕೆಲವರು ದೇವರ ರಾಜ್ಯವು ಪ್ರಬಲವಾಗಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ” ಎಂದು ಹೇಳಿದನು.


ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.


ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.


ನಾನು ಬೇಗನೇ ಬರುತ್ತೇನೆ, ನಿನ್ನ ಕಿರೀಟವನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.


ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.


ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಅವನು ಎಂಥಾ ಮರಣದಿಂದ ದೇವರನ್ನು ಮಹಿಮೆಪಡಿಸುವನು ಎಂಬುದನ್ನು ಯೇಸು ಈ ಮಾತಿನಿಂದ ಸೂಚಿಸಿದನು. ಆತನು ಇದನ್ನು ಹೇಳಿ ಪೇತ್ರನಿಗೆ “ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆದಕಾರಣ ನೀವು ಸಹ ಸಿದ್ಧವಾಗಿರಿ; ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.


ಈ ವಿಷಯಗಳಲ್ಲಿ ಸಾಕ್ಷಿ ಹೇಳುವವನು, “ಹೌದು ನಾನು ನಿಜವಾಗಿ ಬೇಗನೇ ಬರುತ್ತೇನೆ!” ಎಂದು ಹೇಳುತ್ತಾನೆ. ಆಮೆನ್. ಕರ್ತನಾದ ಯೇಸುವೇ ಬಾ.


“ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.


ನೋಡಿರಿ, ಆತನು ಮೇಘಗಳೊಂದಿಗೆ ಬರುತ್ತಾನೆ, ಎಲ್ಲರ ಕಣ್ಣುಗಳು ಆತನನ್ನು ನೋಡುವವು, ಆತನನ್ನು ಇರಿದವರು ಸಹ ಅದನ್ನು ಕಾಣುವರು, ಭೂಮಿಯಲ್ಲಿರುವ ಎಲ್ಲಾ ಕುಲದವರು ಆತನ ನಿಮಿತ್ತ ದುಃಖಿಸುವರು. ಹೌದು, ಹಾಗೆಯೇ ಆಗುವುದು. ಆಮೆನ್.


“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;


ಹೇಗೆ ಮಿಂಚು ಪೂರ್ವದಲ್ಲಿ ಹುಟ್ಟಿ ಪಶ್ಚಿಮದ ವರೆಗೂ ಹೊಳೆಯುತ್ತದೋ ಹಾಗೆಯೇ ಮನುಷ್ಯಕುಮಾರನ ಬರುವಿಕೆಯೂ ಆಗುವುದು.


ಬಳಿಕ ಆತನು ಎಣ್ಣೆಯ ಮರಗಳ ಗುಡ್ಡದ ಮೇಲೆ ಕುಳಿತಿದ್ದಾಗ ಶಿಷ್ಯರು ಆತನ ಬಳಿಗೆ ಪ್ರತ್ಯೇಕವಾಗಿ ಬಂದು, “ಇವೆಲ್ಲವೂ ಯಾವಾಗ ಸಂಭವಿಸುವುದು? ನಿನ್ನ ಬರೋಣಕ್ಕೂ ಲೋಕದ ಸಮಾಪ್ತಿಗೂ ಸೂಚನೆಯೇನು?” ನಮಗೆ ಹೇಳು ಅನ್ನಲು


ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ” ಎಂದು ಹೇಳಿದನು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು,


ನಮ್ಮ ಕರ್ತನಾದ ಯೇಸು ಹಿಂತಿರುಗಿ ಬರುವಾಗ ಆತನ ಮುಂದೆ ನಮ್ಮ ನಿರೀಕ್ಷೆಯೂ, ನಮ್ಮ ಸಂತೋಷವೂ, ನಾವು ಹೊಗಳಿಕೊಳ್ಳುವ ಕಿರೀಟವೂ ಯಾರು? ನೀವೇ ಅಲ್ಲವೇ.


ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು