Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮೇಲಣಿಂದ ಬರುವವನು ಎಲ್ಲರ ಮೇಲೆ ಇದ್ದಾನೆ; ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕದ ಮಾತನ್ನು ಆಡುತ್ತಾನೆ; ಪರಲೋಕದಿಂದ ಬರುವವನು ಎಲ್ಲರ ಮೇಲೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಮೇಲಿನಿಂದ ಬರುವ ಒಬ್ಬನು (ಯೇಸು) ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ. ಈ ಲೋಕದ ವ್ಯಕ್ತಿಯು ಈ ಲೋಕಕ್ಕೆ ಸೇರಿದವನಾಗಿದ್ದಾನೆ. ಅವನು ಈ ಲೋಕದಲ್ಲಿನ ಸಂಗತಿಗಳ ಬಗ್ಗೆ ಮಾತಾಡುತ್ತಾನೆ. ಆದರೆ ಪರಲೋಕದಿಂದ ಬರುವ ಒಬ್ಬನು ಬೇರೆಲ್ಲಾ ಜನರಿಗಿಂತಲೂ ದೊಡ್ಡವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಜೊ ಕೊನ್ ವೈನಾ ಯೆತಾ ತೊ ಸಗ್ಳ್ಯಾಂಚ್ಯಾನ್ಕಿ ಮೊಟೊ, ಜೊ ಕೊನ್ ಹ್ಯಾ ಜಿಮ್ನಿಕ್ ಸಮಂದ್ ಪಡಲ್ಲೊ ಹಾಯ್, ತೊ ಹ್ಯಾ ಜಿಮ್ನಿ ವೈಲೊಚ್, ಅನಿ ಹ್ಯಾ ಜಿಮ್ನಿ ವೈಲ್ಯಾ ವಿಶಯಾತುಚ್ ತೊ ಬೊಲ್ತಾ, ಖರೆ ಜೊ ಸರ್ಗಾವೈನಾ, ಯೆಲಾ ತೊ ಸಗ್ಳ್ಯಾಂಚ್ಯಾನ್ಕಿ ವೈಲೊ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:31
22 ತಿಳಿವುಗಳ ಹೋಲಿಕೆ  

ಆತನು ಅವರಿಗೆ, “ನೀವು ಕೆಳಗಿನವರು; ನಾನು ಮೇಲಿನಿಂದ ಬಂದವನು. ನೀವು ಈ ಲೋಕದವರು; ನಾನು ಈ ಲೋಕದವನಲ್ಲ.


ಯೇಸು ಅವರ ಹತ್ತಿರಕ್ಕೆ ಬಂದು, “ಪರಲೋಕದಲ್ಲಿಯೂ, ಭೂಲೋಕದಲ್ಲಿಯೂ ಇರುವ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.


ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.


ಅವರು ಲೋಕಸಂಬಂಧಿಗಳಾಗಿದ್ದಾರೆ. ಈ ಕಾರಣದಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ, ದೇವದೂತರು, ಅಧಿಕಾರಿಗಳು ಮತ್ತು ಶಕ್ತಿಗಳೂ ಆತನ ಸ್ವಾಧೀನವಾಗಿವೆ.


ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.


ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.


ಹೀಗಿದ್ದರೂ ಮೊದಲನೆಯ ಒಡಂಬಡಿಕೆಗೂ ದೇವಾರಾಧನೆಯ ವಿಧಿವಿಧಾನಗಳಿದ್ದವು ಮತ್ತು ಇಹಲೋಕ ಸಂಬಂಧವಾದ ದೇವಾಲಯವಿತ್ತು.


‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.


ಆತನ ವಿಷಯವಾಗಿ ಯೋಹಾನನು ಸಾಕ್ಷಿಕೊಡುತ್ತಾನೆ, ಹೇಗೆಂದರೆ “‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದಾತನು ಈತನೇ” ಎಂದು ಘೋಷಿಸಿದನು.


ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು