Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 3:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ದೇವರು ಆತನನ್ನು (ಯೇಸುವನ್ನು) ಕಳುಹಿಸಿದನು. ದೇವರು ಹೇಳುವ ಸಂಗತಿಗಳನ್ನು ಆತನು ಹೇಳುತ್ತಾನೆ. ಏಕೆಂದರೆ ದೇವರು ಆತನಿಗೆ ಆತ್ಮವನ್ನು ಅಮಿತವಾಗಿ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆ ಕೊನಾಕ್ ದೆವಾನ್ ಧಾಡುನ್ ದಿಲ್ಯಾನಾಯ್ ತೊ ದೆವಾಚ್ಯಾಚ್ ಗೊಸ್ಟಿಯಾ ಬೊಲ್ತಾ, ಕಶ್ಯಾಕ್ ಮಟ್ಲ್ಯಾರ್ ದೆವ್ ತೆಕಾ ಅಪ್ನಾಚೊ ಆತ್ಮೊ ಭರ್‍ಪುರ್ ಮಾಪಾನಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 3:34
29 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.


ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.


“ಇಗೋ, ನಾನು ಆರಿಸಿಕೊಂಡ ನನ್ನ ಸೇವಕನು. ಈತನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. ಈತನಲ್ಲಿ ನನ್ನ ಆತ್ಮವನ್ನು ಇರಿಸುವೆನು. ಈತನು ಅನ್ಯಜನಗಳಿಗೂ ನ್ಯಾಯವಿಧಿಯನ್ನು ಸಾರುವನು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ತಂದೆಯು ತಾನು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ, ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಮಾಡಿದ್ದಾನೆ.


“ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವಾರ್ತೆಯನ್ನು ಸಾರುವುದಕ್ಕಾಗಿ ಅಭಿಷೇಕಿಸಿರುವನು. ಸೆರೆಯಲ್ಲಿರುವವರನ್ನು ಬಿಡುಗಡೆಮಾಡುವುದಕ್ಕೂ, ಮತ್ತು ಕುರುಡರಿಗೆ ಕಣ್ಣು ಬರುವುದಕ್ಕೂ ಹಿಂಸಿಸಲ್ಪಟ್ಟವರನ್ನು ಬಿಡಿಸಿ ಕಳುಹಿಸುವುದಕ್ಕೂ


ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,


ಯಾಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಜೀವವನ್ನುಂಟುಮಾಡುವ ಪವಿತ್ರಾತ್ಮನ ನಿಯಮವು ನನ್ನನ್ನು ಪಾಪಮರಣಗಳಿಗೆ ಕಾರಣವಾದ ನಿಯಮದಿಂದ ವಿಮುಕ್ತಿಗೊಳಿಸಿತು.


ಅದಕ್ಕೆ ಯೇಸು “ನಾನು ಹೇಳುವ ಬೋಧನೆಯು ನನ್ನದಲ್ಲ. ನನ್ನನ್ನು ಕಳುಹಿಸಿದಾತನದೇ.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


ಯೇಸು ಕ್ರಿಸ್ತನ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಹೊಂದಿದೆವು.


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.


ಆ ಮೇಲೆ ಅವನು ಸ್ಫಟಿಕದಂತೆ ಅತಿಶುದ್ಧವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಮರಿಯಾದಾತನ ಸಿಂಹಾಸನದಿಂದ ಹೊರಟು,


ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮಗೆ ಒಳ್ಳೆಯದು, ಹೇಗೆಂದರೆ ನಾನು ಹೋಗದಿದ್ದರೆ ಆ ಸಹಾಯಕನು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಆತನನ್ನು ನಿಮ್ಮ ಬಳಿಗೆ ಕಳುಹಿಸಿಕೊಡುತ್ತೇನೆ.


ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟು ಹೋಗುವ ಮೊದಲು, ನಾನು ನಿನಗೋಸ್ಕರ ಏನು ಮಾಡಬೇಕೆನ್ನುತ್ತೀ ಹೇಳು” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿನಗಿರುವ ಆತ್ಮದಲ್ಲಿ ನನಗೆ ಎರಡರಷ್ಟು ಪಾಲನ್ನು ಅನುಗ್ರಹಿಸು” ಎಂದು ಬೇಡಿಕೊಂಡನು.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.


ಆಗ ಸಿಂಹಾಸನದ ಮೇಲೆ ಕುಳಿತಿದ್ದಾತನು, “ಎಲ್ಲಾ ನೆರವೇರಿತು, ನಾನೇ ಆದಿಯು, ಅಂತ್ಯವೂ, ಪ್ರಾರಂಭವೂ, ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಕ್ರಯವಿಲ್ಲದೆ ಕುಡಿಯುವುದಕ್ಕೆ ಕೊಡುವೆನು.


ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.


ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.


ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.


ಆತನು ಸ್ವರ್ಗಾರೋಹಣವಾದ ದಿನದವರೆಗೆ ಆತನು ಮಾಡಿದ ಎಲ್ಲಾ ಕಾರ್ಯಗಳನ್ನೂ, ಉಪದೇಶಿಸಿದ ಎಲ್ಲಾ ಬೋಧನೆಗಳನ್ನೂ ಬರೆದಿದ್ದೇನೆ.


ಯೆಹೋವನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶದವರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳಾಗಿರುವವು. ಮೋಶೆ ಅವರನ್ನು ಯೆಹೋವನ ಸನ್ನಿಧಿಯಲ್ಲಿ ಯಾಜಕೋದ್ಯೋಗಕ್ಕಾಗಿ ಪ್ರತಿಷ್ಠಿಸಿದ ದಿನದಲ್ಲೇ ಇದು ನೇಮಕವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು