Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೇಸು ಅವರಿಗೆ - ನನ್ನನ್ನು ಕಳುಹಿಸಿದಾತನ ಚಿತ್ತದಂತೆ ಮಾಡಿ ಆತನ ಕೆಲಸವನ್ನು ಪೂರೈಸುವದೇ ನನ್ನ ಆಹಾರವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ, “ಮಾಕಾ ಧಾಡಲ್ಲ್ಯಾಚ್ಯಾ ಗೊಸ್ಟಿಕ್ ಖಾಲ್ತಿ ಹೊತಲೆ, ಅನಿ ಮಾಕಾ ಜೆ ಕಾಯ್ ಕರುಕ್ ಮನುನ್ ಧಾಡಲ್ಲೆ ಹಾಯ್ ತೆ ಪುರಾ ಕರ್‍ತಲೆಚ್, ಮಾಜೆ ಜೆವಾನ್” ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:34
21 ತಿಳಿವುಗಳ ಹೋಲಿಕೆ  

ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು ತಂದೆಯು ಹೇಳಿದ್ದನ್ನು ನಾನು ಕೇಳಿ ನ್ಯಾಯತೀರಿಸುತ್ತೇನೆ ಮತ್ತು ಸ್ವಂತ ಚಿತ್ತ ನೆರವೇರಬೇಕೆಂದು ಅಪೇಕ್ಷಿಸದೆ ನನ್ನನ್ನು ಕಳುಹಿಸಿದಾತನ ಚಿತ್ತ ನೆರವೇರಬೇಕೆಂದು ನಾನು ಬಯಸುವುದರಿಂದ ನಾನು ಮಾಡುವ ತೀರ್ಪು ನ್ಯಾಯವಾಗಿದೆ.


ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.


ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆ ಬಾಗಿಸಿ ತನ್ನ ಆತ್ಮವನ್ನು ಒಪ್ಪಿಸಿಕೊಟ್ಟನು.


ಆತನು ಸ್ವಲ್ಪ ಮುಂದೆ ಹೋಗಿ ಬೋರಲು ಬಿದ್ದು, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾನಪಾತ್ರೆಯು ನನ್ನನ್ನು ಬಿಟ್ಟುಹೋಗಲಿ; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ” ಎಂದು ದೇವರನ್ನು ಪ್ರಾರ್ಥಿಸಿದನು.


ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


ಆದರೆ ಆತನು ಅವರಿಗೆ “ನಿಮಗೆ ತಿಳಿಯದಿರುವ ಆಹಾರವು ನನ್ನ ಬಳಿಯಲ್ಲಿ ಉಂಟು” ಎಂದು ಹೇಳಲು


ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು” ಎಂದು ಹೇಳಿದನು.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.


ದೇವರು ಕೊಡುವ ಆ ರೊಟ್ಟಿ ಯಾವುದೆಂದರೆ, ಪರಲೋಕದಿಂದ ಇಳಿದು ಬಂದು ಲೋಕಕ್ಕೆ ಜೀವವನ್ನು ಉಂಟುಮಾಡುವಂಥದ್ದೇ” ಎಂದು ಹೇಳಿದನು.


ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.


ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.


ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದನು.


ಯೇಸು ಎದ್ದು ಆ ಅಧಿಕಾರಿಯ ಹಿಂದೆ ಹೋಗುವಾಗ ಆತನ ಶಿಷ್ಯರು ಸಹ ಆತನನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು