Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 4:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನು” ಎಂಬುದಾಗಿ ಸಾಕ್ಷಿಕೊಡುತ್ತಿರುವ ಆ ಸ್ತ್ರೀಯ ಮಾತಿನಿಂದ, ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನು ಮಾಡಿದ್ದನ್ನೆಲ್ಲಾ ಆತನು ನನಗೆ ಹೇಳಿದನೆಂಬದಾಗಿ ಸಾಕ್ಷಿಕೊಡುತ್ತಿರುವ ಆ ಹೆಂಗಸಿನ ಮಾತಿನ ಮೇಲೆ ಆ ಊರಿನ ಸಮಾರ್ಯರಲ್ಲಿ ಅನೇಕರು ಆತನನ್ನು ನಂಬುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆ ಸಮಾರ್ಯ ಪಟ್ಟಣದ ಜನರಲ್ಲಿ ಅನೇಕರು ಯೇಸುವನ್ನು ನಂಬಿದರು. ಏಕೆಂದರೆ ಆ ಸ್ತ್ರೀಯು ಆತನ ವಿಷಯವಾಗಿ ಅವರಿಗೆ, “ನಾನು ಮಾಡಿರುವ ಪ್ರತಿಯೊಂದನ್ನೂ ಆತನು ನನಗೆ ತಿಳಿಸಿದನು” ಎಂದು ಹೇಳಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತ್ಯಾ ಬಾಯ್ಕೊಮನ್ಸಿನ್ “ಮಿಯಾ ಕರಲ್ಲೆ ಸಗ್ಳೆ ತೆನಿ ಮಾಕಾ ಸಾಂಗ್ಲ್ಯಾನ್” ಮನುನ್ ಸಾಂಗಲ್ಲ್ಯಾ ತನ್ನಾ ತ್ಯಾ ಶಾರಾತ್ಲ್ಯಾ ಸುಮಾರ್ ಸಮಾರಿಯಾಚ್ಯಾ ಲೊಕಾನಿ ಜೆಜುಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 4:39
11 ತಿಳಿವುಗಳ ಹೋಲಿಕೆ  

“ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಬರತಕ್ಕ ಕ್ರಿಸ್ತನು ಅವನೇ ಇರಬಹುದೋ?” ಎಂದು ಹೇಳಿದಳು.


ಹೋಗುವಾಗ ಸಮಾರ್ಯ ಸೀಮೆಗೆ ಸೇರಿದ ಸುಖರೆಂಬ ಊರಿಗೆ ಬಂದನು. ಅದು ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಹತ್ತಿರದಲ್ಲಿತ್ತು.


ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.


ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.


ಈ ಹನ್ನೆರಡು ಮಂದಿಯನ್ನು ಯೇಸು ಕಳುಹಿಸಿದನು; ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟದ್ದೇನಂದರೆ, “ಅನ್ಯಜನಗಳಿರುವಲ್ಲಿಗೆ ಹೋಗಬೇಡಿರಿ, ಸಮಾರ್ಯದವರ ಊರೊಳಗೆ ಕಾಲಿಡಬೇಡಿರಿ;


ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.


ಆಗ ಅವರೆಲ್ಲರು ಊರನ್ನು ಬಿಟ್ಟು ಆತನ ಬಳಿಗೆ ಬಂದರು.


ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.


ಆದುದರಿಂದ ಆ ಸಮಾರ್ಯದವರು ಆತನ ಬಳಿಗೆ ಬಂದು; ನೀನು ನಮ್ಮಲ್ಲಿ ಇರಬೇಕೆಂದು ಆತನನ್ನು ಬೇಡಿಕೊಳ್ಳಲು, ಆತನು ಎರಡು ದಿನ ಅಲ್ಲಿಯೇ ತಂಗಿದನು.


ಆ ಇಬ್ಬರು ಶಿಷ್ಯರು ಯೋಹಾನನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು