ಯೋಹಾನ 4:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಗಲಿಲಾಯದವರು ತಾವೂ ಯೆರೂಸಲೇವಿುನ ಜಾತ್ರೆಗೆ ಹೋಗಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ನೋಡಿದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಆದರದಿಂದ ಅಂಗೀಕರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಈ ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 ತೊ ಗಾಲಿಲಿಯಾಕ್ ಯೆವ್ನ್ ಪಾವಲ್ಲ್ಯಾ ತನ್ನಾ ಥೈತ್ಲ್ಯಾ ಲೊಕಾನಿ ತೆಕಾ ಸ್ವಾಗತ್ ಕರ್ಲ್ಯಾನಿ, ಕಶ್ಯಾಕ್ ಮಟ್ಲ್ಯಾರ್ ತೆನಿ ಜೆರುಜಲೆಮಾಕ್ ಪಾಸ್ಕಾಚ್ಯಾ ಸನಾಕ್ ಗೆಲ್ಲ್ಯಾ ತನ್ನಾ ಜೆಜುನ್ ಕರಲ್ಲಿ ಸಗ್ಳಿ ಕಾಮಾ ತೆನಿ ಬಗಟಲ್ಲ್ಯಾನಿ. ಅಧ್ಯಾಯವನ್ನು ನೋಡಿ |