ಯೋಹಾನ 4:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಅಧಿಕಾರಿಯು ಕೇಳಿದಾಗ ತನ್ನ ಮಗನು ಸಾಯುವ ಸ್ಥಿತಿಯಲ್ಲಿದುದ್ದರಿಂದ ಯೇಸುವಿನ ಬಳಿಗೆ ಹೋಗಿ, “ನೀನು ಬಂದು ನನ್ನ ಮಗನನ್ನು ಸ್ವಸ್ಥಮಾಡು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಸುದ್ದಿಯನ್ನು ಆ ಪ್ರಧಾನನು ಕೇಳಿದಾಗ ತನ್ನ ಮಗನು ಸಾಯುವ ಹಾಗಿದ್ದದರಿಂದ ಯೇಸುವಿನ ಬಳಿಗೆ ಹೋಗಿ - ನೀನು ಇಳಿದು ಬಂದು ನನ್ನ ಮಗನನ್ನು ಸ್ವಸ್ಥಮಾಡಬೇಕೆಂದು ಬೇಡಿಕೊಂಡನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಯೇಸು ಜುದೇಯದಿಂದ ಬಂದು ಈಗ ಗಲಿಲಾಯದಲ್ಲಿ ಇದ್ದಾನೆ ಎಂಬ ಸುದ್ದಿಯನ್ನು ಅವನು ಕೇಳಿದನು. ಆದ್ದರಿಂದ ಅವನು ಆತನ ಬಳಿಗೆ ಹೋಗಿ ತನ್ನ ಮಗನನ್ನು ಗುಣಪಡಿಸುವುದಕ್ಕಾಗಿ ಕಪೆರ್ನೌಮ್‌ಗೆ ಬರಬೇಕೆಂದು ಆತನನ್ನು ಬೇಡಿಕೊಂಡನು. ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಜೆಜು ಜದೆಯಾತ್ನಾ ಗಾಲಿಲಿಯಾಕ್ ಯೆಲಾ ಮನ್ತಲೆ ಆಯ್ಕಲ್ಲ್ಯಾ, ತನ್ನಾ ತೊ ಜೆಜುಕ್ಡೆ ಗೆಲೊ, ಅನಿ ಶಿಕ್ ಪಡುನ್ ಮರ್‍ತಲ್ಯಾ ಪರಿಸ್ತಿತಿರ್ ಹೊತ್ತ್ಯಾ ಅಪ್ನಾಚ್ಯಾ ಲೆಕಾಕ್ ಕಫರ್ನವ್ಕ್ ಜಾವ್ನ್ ಗುನ್ ಕರ್ ಮಾಗುಲಾಲೊ. ಅಧ್ಯಾಯವನ್ನು ನೋಡಿ |