ಯೋಹಾನ 4:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಸಮಾರ್ಯದ ಸ್ತ್ರೀಯು ಆತನಿಗೆ, “ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದಾದರೂ ಹೇಗೆ?” ಎಂದು ಹೇಳಿದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಹೊಕ್ಕುಬಳಕೆ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ). ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಯೆಹೂದ್ಯರಿಗೂ ಸಮಾರ್ಯರಿಗೂ ಬಳಕೆಯಿಲ್ಲದಿರಲಾಗಿ ಆ ಸಮಾರ್ಯದವಳು ಆತನಿಗೆ - ಯೆಹೂದ್ಯನಾದ ನೀನು ಸಮಾರ್ಯದವಳಾದ ನನ್ನನ್ನು ನೀರು ಬೇಡುವದು ಹೇಗೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಮಾರ್ಯದ ಸ್ತ್ರೀಯು, “ಕುಡಿಯುವ ನೀರಿಗಾಗಿ ನೀನು ನನ್ನನ್ನು ಕೇಳುತ್ತಿರುವುದು ನನಗೆ ಆಶ್ಚರ್ಯವನ್ನು ಉಂಟುಮಾಡಿದೆ! ನೀನಾದರೋ ಯೆಹೂದ್ಯನು. ನಾನಾದರೋ ಸಮಾರ್ಯದವಳು!” ಎಂದು ಹೇಳಿದಳು. (ಯೆಹೂದ್ಯರು ಸಮಾರ್ಯದವರೊಂದಿಗೆ ಸ್ನೇಹದಿಂದಿರಲಿಲ್ಲ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತನ್ನಾ ತ್ಯಾ ಬಾಯ್ಕೊಮನ್ಸಿನ್, “ತಿಯಾ ಎಕ್ ಜುದೆವ್, ಅನಿ ಮಿಯಾ ಎಕ್ ಸಮಾರಿಯಾಕಾರ್‍ನಿ- ತಿಯಾ ಮಾಜಾಕ್ಡೆ ಫಿವ್ಕ್ ಪಾನಿ ದಿ ಮನುನ್ ಕಶೆ ಮಾಗುಲಾಲೆಯ್?” ಮನುನ್ ಜವಾಬ್ ದಿಲಿನ್ ಜುದೆವ್ ಲೊಕಾ ಅನಿ ಸಮಾರಿಯಾಚ್ಯಾ ಲೊಕಾಂಚ್ಯಾ ಮದ್ದಿ ಕಸ್ಲೊಬಿ ಸಮಂದ್ ನತ್ತೊ. ಅಧ್ಯಾಯವನ್ನು ನೋಡಿ |