Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆದುದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ, “ಈ ದಿನ ಸಬ್ಬತ್ ದಿನವಾದುದರಿಂದ ನೀನು ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ಧರ್ಮಶಾಸ್ತ್ರಕ್ಕೆ ವಿರುದ್ಧವಾಗಿದೆಯೆಂದು” ಹೇಳಿದ್ದಕ್ಕೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆದರೆ ಆ ದಿವಸ ಸಬ್ಬತ್‍ದಿನವಾಗಿತ್ತು; ಹೀಗಿರುವದರಿಂದ ಯೆಹೂದ್ಯರು ಸ್ವಸ್ಥವಾದವನಿಗೆ - ಈ ಹೊತ್ತು ಸಬ್ಬತ್‍ದಿನವಾಗಿದೆ; ನೀನು ಹಾಸಿಗೆಯನ್ನು ಹೊರುವದು ಸರಿಯಲ್ಲವೆಂದು ಹೇಳಿದ್ದಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದ್ದರಿಂದ ಯೆಹೂದ್ಯರು ಗುಣಹೊಂದಿದ ಆ ವ್ಯಕ್ತಿಗೆ, “ಇಂದು ಸಬ್ಬತ್‌ದಿನ. ನೀನು ಸಬ್ಬತ್‌ದಿನದಲ್ಲಿ ಹಾಸಿಗೆಯನ್ನು ಹೊತ್ತುಕೊಂಡು ಹೋಗುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆಚೆಸಾಟ್ನಿ ಜುದೆವ್ ಲೊಕಾಂಚ್ಯಾ ಅದಿಕಾರ್‍ಯಾನಿ ತ್ಯಾ ಗುನ್ ಹೊಲ್ಲ್ಯಾ ಮಾನ್ಸಾಕ್, “ಸಬ್ಬತಾಚ್ಯಾ ದಿಸಿ ಹಾತ್ರಾನ್ ವಾವುನ್ ಘೆವ್ನ್ ಜಾತಲೆ ಅಮ್ಚ್ಯಾ ಖಾಯ್ದ್ಯಾಚ್ಯಾ ಪರ್‍ಕಾರ್ ಚುಕ್” ಮನುನ್ ಸಾಂಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:10
19 ತಿಳಿವುಗಳ ಹೋಲಿಕೆ  

ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.


ಆದರೆ ಫರಿಸಾಯರಲ್ಲಿ ಕೆಲವರು, “ಸಬ್ಬತ್ ದಿನದಲ್ಲಿ ನಿಷಿದ್ಧವಾದ ಕೆಲಸವನ್ನು ನೀವು ಯಾಕೆ ಮಾಡುತ್ತೀರಿ?” ಎಂದು ಕೇಳಿದ್ದಕ್ಕೆ,


ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.


ಆಗ ಅವರಿಗೆ, “ಸಬ್ಬತ್ ದಿನದಲ್ಲಿ ಧರ್ಮಸಮ್ಮತವಾದದು ಯಾವುದು? ಮೇಲನ್ನು ಮಾಡುವುದೋ, ಕೇಡನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ, ತೆಗೆಯುವುದೋ?” ಎಂದು ಹೇಳಲು ಅವರು ಸುಮ್ಮನಿದ್ದರು.


ಫರಿಸಾಯರು ಆತನನ್ನು, “ನೋಡು, ಇವರು ಸಬ್ಬತ್ ದಿನದಲ್ಲಿ ಧರ್ಮಸಮ್ಮತವಲ್ಲದ್ದನ್ನು ಏಕೆ ಮಾಡುತ್ತಾರೆ?” ಎಂದು ಕೇಳಿದರು.


ಆದಕಾರಣ ಯೆಹೂದ್ಯರು, ಯೇಸು ಸಬ್ಬತ್ ದಿನಗಳಲ್ಲಿ ಇಂಥಾ ಕಾರ್ಯಗಳನ್ನು ಮಾಡುತ್ತಾನಲ್ಲಾ ಎಂದು ಆತನನ್ನು ಹಿಂಸಿಸತೊಡಗಿದರು.


ಮೋಶೆಯ ಧರ್ಮಶಾಸ್ತ್ರವನ್ನು ಮೀರಬಾರದೆಂದು ಒಬ್ಬನು ಸಬ್ಬತ್ ದಿನದಲ್ಲಿ ಸುನ್ನತಿಯನ್ನು ಮಾಡಿಸಿಕೊಳ್ಳುವುದಾದರೆ, ನಾನು ಸಬ್ಬತ್ ದಿನದಲ್ಲಿ ಒಬ್ಬ ಮನುಷ್ಯನನ್ನು ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ಆಗ ಅಲ್ಲಿ ಕೈಬತ್ತಿದವನೊಬ್ಬನಿದ್ದನು. ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನನ್ನು, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯವೋ?” ಎಂದು ಕೇಳಿದರು.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಅವನು, “ನನ್ನನ್ನು ಸ್ವಸ್ಥಮಾಡಿದವನೇ ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದನು” ಎಂದನು.


ಆ ಮನುಷ್ಯನು ಅಲ್ಲಿಂದ ಹೋಗಿ, ತನ್ನನ್ನು ಸ್ವಸ್ಥಪಡಿಸಿದಾತನು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು