ಯೋಹಾನ 5:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೇಸು ಈ ಮಾತನ್ನು ಹೇಳಿದ್ದರಿಂದ, ಆತನು ಸಬ್ಬತ್ ದಿನವನ್ನು ಅಲಕ್ಷ್ಯಮಾಡಿದ್ದಲ್ಲದೇ, ದೇವರನ್ನು ತನ್ನ ಸ್ವಂತ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಸಮಾನ ಮಾಡಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೇಸು ಸಬ್ಬತ್ತನ್ನು ಉಲ್ಲಂಘಿಸಿದ್ದಲ್ಲದೆ ದೇವರನ್ನು ತನ್ನ ತಂದೆಯೆಂದು ಹೇಳಿಕೊಂಡು ತನ್ನನ್ನು ದೇವರಿಗೆ ಸರಿಸಮಾನನನ್ನಾಗಿ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಆತನನ್ನು ಕೊಲ್ಲಲು ಮತ್ತಷ್ಟು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಹ್ಯಾ ಗೊಸ್ಟಿಕ್ ಲಾಗುನ್ ಜುದೆವಾಂಚ್ಯಾ ಅದಿಕಾರ್‍ಯಾಂಚ್ಯಾ ಮನಾತ್ನಿ ಜೆಜುಕ್ ಜಿವಾನಿ ಮಾರುಕ್ ಪಾಜೆ ಮನ್ತಲೊ ಘಟ್ ನಿರ್‍ದಾರ್ ಹೊಲೊ; ತೆನಿ ಖಾಲಿ ಸಬ್ಬಾತಾಚೊ ಖಾಯ್ದೊ ಮೊಡ್ಲ್ಯಾನ್ ಮನುನ್ ಎವ್ಡೆಚ್ ನ್ಹಯ್, ಜಾಲ್ಯಾರ್ ತೆನಿ ದೆವಾಕುಚ್ ಅಪ್ನಾಚೊ ಸ್ವತಾಚೊ ಬಾಬಾ ಮನುನ್ ಘೆಟಲ್ಲ್ಯಾನ್, ಅನಿ ಅಪ್ನಾಕುಚ್ ದೆವಾಚ್ಯಾ ಸಮಾ ಮನುನ್ ಕರುನ್ ಘೆಟಲ್ಲ್ಯಾನ್. ಅಧ್ಯಾಯವನ್ನು ನೋಡಿ |