Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನನಗಂತೂ ಯೋಹಾನನ ಸಾಕ್ಷಿಗಿಂತ ಹೆಚ್ಚಿನ ಸಾಕ್ಷಿ ಉಂಟು; ಹೇಗಂದರೆ ಪೂರೈಸುವದಕ್ಕೆ ತಂದೆ ನನಗೆ ಕೊಟ್ಟಿರುವ ಕೆಲಸಗಳು, ಅಂದರೆ ನಾನು ಮಾಡುವ ಕೆಲಸಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟನೆಂಬದಾಗಿ ನನ್ನ ವಿಷಯದಲ್ಲಿ ಸಾಕ್ಷಿಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಆದರೆ ನನ್ನ ಬಗ್ಗೆ ನನ್ನಲ್ಲಿ ಯೋಹಾನನಿಗಿಂತಲೂ ಹೆಚ್ಚಿನ ಸಾಕ್ಷಿಗಳಿವೆ. ನಾನು ಮಾಡುವ ಕಾರ್ಯಗಳೇ ನನ್ನ ಸಾಕ್ಷಿಗಳಾಗಿವೆ. ತಂದೆಯು ನನಗೆ ಕೊಟ್ಟಿರುವ ಈ ಕಾರ್ಯಗಳೇ, ತಂದೆಯು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ ಎಂಬುದನ್ನು ತೋರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 “ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

36 ಖರೆ ಮಾಜ್ಯಾಕ್ಡೆ ಮಾಜ್ಯಾಚ್ ವಿಶಯಾತ್ ಜುವಾಂವಾಕ್ ದಿಲ್ಲ್ಯಾ ಸಾಕ್ಷಿನ್ಕಿ ಮೊಟಿ ಸಾಕ್ಷಿ ಹಾಯ್! ಜೆ ಕಾಯ್ ಮಿಯಾ ಕರುಲಾಲಾ, ತೆ ಮಾಜ್ಯಾ ಬಾಬಾನುಚ್ ಮಾಕಾ ಕರ್ ಮನುನ್ ದಿಲ್ಲೆ ಹಾಯ್, ಹಿ ಮಿಯಾ ಕರ್‍ತಲಿ ಕಾಮಾಚ್ ಮಾಕಾ ಬಾಬಾನ್ ಧಾಡುನ್ ದಿಲ್ಯಾನಾಯ್ ಮನುನ್ ದಾಕ್ವುನ್ ದಿತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:36
17 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬುವುದಿಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಯಾಗಿವೆ.


ಬೇರೆ ಯಾರೂ ಮಾಡದಿರುವ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಅದ್ಭುತಕಾರ್ಯಗಳನ್ನು ನೋಡಿದ್ದಾರೆ, ಆದರೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಿಸಿದ್ದಾರೆ


ಆತನು ಪಸ್ಕಹಬ್ಬದ ಜಾತ್ರೆಯಲ್ಲಿ ಯೆರೂಸಲೇಮಿನಲ್ಲಿ ಇದ್ದಾಗ ಬಹು ಜನರು ಆತನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಆತನ ಹೆಸರಿನಲ್ಲಿ ನಂಬಿಕೆ ಇಟ್ಟರು.


ನಾವು ಮನುಷ್ಯರ ಸಾಕ್ಷಿಯನ್ನು ಒಪ್ಪಿಕೊಳ್ಳುತ್ತೇವಲ್ಲಾ, ಹಾಗೆ ದೇವರ ಸಾಕ್ಷಿಯು ಅದಕ್ಕಿಂತಲೂ ಶ್ರೇಷ್ಠವಾಗಿದೆ. ಏಕೆಂದರೆ ದೇವರು ಕೊಟ್ಟ ಸಾಕ್ಷಿಯು ತನ್ನ ಮಗನ ಕುರಿತದ್ದಾಗಿದೆ.


ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.


ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;


“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ನೀನು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಲೋಕದಲ್ಲಿ ನಾನು ನಿನ್ನನ್ನು ಮಹಿಮೆಪಡಿಸಿದ್ದೇನೆ.


ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.


ಆತನು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?” ಎಂದು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು