Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 5:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

39 ತುಮಿ ಪವಿತ್ರ್ ಪುಸ್ತಕಾತ್ಲೆ ಬರೆ ಕರುನ್ ಶಿಕ್ಲ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ತ್ಯಾತುರ್‍ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ಹಾಯ್ ಮನುನ್ ತುಮಿ ಚಿಂತ್ಯಾಶಿ, ಖರೆ ತಿ ಸಗ್ಳಿ ನಿಯಮಾ ಪವಿತ್ರ್ ಪುಸ್ತಾಕಾ ಮಾಜ್ಯಾಚ್ ವಿಶಯಾತ್ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 5:39
51 ತಿಳಿವುಗಳ ಹೋಲಿಕೆ  

ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.


ತರುವಾಯ ಯೇಸು, “ನಾನು ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ, ಪ್ರವಾದಿಗಳ ಗ್ರಂಥಗಳಲ್ಲಿಯೂ, ಕೀರ್ತನೆಗಳಲ್ಲಿಯೂ ಬರೆದಿರುವುದೆಲ್ಲಾ ನೆರವೇರುವುದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ?” ಅಂದನು.


ಆ ಸಭೆಯವರು ದೇವರ ವಾಕ್ಯವನ್ನು ಸಿದ್ಧ ಮನಸ್ಸಿನಿಂದ ಅಂಗೀಕರಿಸಿ ಇವರು ಹೇಳುವ ಮಾತು ಹೌದೋ ಅಲ್ಲವೋ ಎಂದು ಕಂಡುಕೊಳ್ಳಲು ಪ್ರತಿದಿನವೂ ಶಾಸ್ತ್ರಗ್ರಂಥಗಳನ್ನು ಶೋಧಿಸುತ್ತಿದ್ದದರಿಂದ ಅವರು ಥೆಸಲೋನಿಕದವರಿಗಿಂತ ಸದ್ಗುಣವುಳವರಾಗಿದ್ದರು.


ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;


ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.


ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.


ಅವನು ನನ್ನ ವಿಷಯವಾಗಿ ಬರೆದನು, ಆದುದರಿಂದ ನೀವು ಮೋಶೆಯನ್ನೂ ನಂಬುವವರಾಗಿದ್ದರೆ ನನ್ನನ್ನೂ ನಂಬುತ್ತಿದ್ದಿರಿ.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.


“‘ಮನೆಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ಹಾಗು ದೇವಜನರಾಗುವುದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವ ಪತ್ರ;


ಅಗ್ರಿಪ್ಪರಾಜನೇ, ಪ್ರವಾದಿಗಳಲ್ಲಿ ನಿನಗೆ ನಂಬಿಕೆಯುಂಟೋ?” ಉಂಟೆಂದು ನಾನು ಬಲ್ಲೆನು ಅಂದನು.


ಅವರು ಅವನಿಗೆ “ನೀನು ಸಹ ಗಲಿಲಾಯದವನೋ? ನೀನೇ ಪರಿಶೋಧಿಸಿ ನೋಡು ಗಲಿಲಾಯದಿಂದ ಪ್ರವಾದಿಯು ಬರುವುದಿಲ್ಲ,” ಎಂದರು.


ನನ್ನ ವಿಷಯವಾಗಿ ಸಾಕ್ಷಿ ಹೇಳುವವನು ಮತ್ತೊಬ್ಬನಿದ್ದಾನೆ. ಆತನು ನನ್ನ ವಿಷಯವಾಗಿ ಹೇಳುವ ಸಾಕ್ಷಿಯು ನಿಜವೆಂದು ನಾನು ಬಲ್ಲೆನು.


ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.


ನನಗಂತೂ ಯೋಹಾನನ ಸಾಕ್ಷಿಗಿಂತ ದೊಡ್ಡದಾದಸಾಕ್ಷಿ ಉಂಟು. ಹೇಗೆಂದರೆ, ಪೂರೈಸುವುದಕ್ಕೆ ತಂದೆಯು ನನಗೆ ಕೊಟ್ಟಿರುವ ಕೆಲಸಗಳೇ, ಅಂದರೆ ನಾನು ಮಾಡುವ ಈ ಕೆಲಸಗಳೇ ತಂದೆಯು ನನ್ನನ್ನು ಕಳುಹಿಸಿದ್ದಾನೆಂದು ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.


ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.


ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.


ಅಬ್ರಹಾಮನು ಅವನಿಗೆ, ‘ಅವರು ಮೋಶೆಯ ಮಾತನ್ನೂ ಪ್ರವಾದಿಗಳ ಮಾತನ್ನೂ ಕೇಳದಿದ್ದರೆ ಸತ್ತುಹೋಗಿದ್ದವನೊಬ್ಬನು ಜೀವಿತನಾಗಿ ಎದ್ದರೂ ಅವರು ಒಪ್ಪುವುದಿಲ್ಲ’ ಎಂದು ಹೇಳಿದನು.”


ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.


ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಕೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲವೂ, ನೀನು ಹೋಗುವ ಮಾರ್ಗಗಳು ಸಫಲವಾಗುವುದು. ನೀನು ಚುರುಕು ಬುದ್ಧಿಯ ವ್ಯಕ್ತಿಯಾಗಿ ರೂಪಾಂತರ ಹೊಂದುವಿ.


ಇದು ನಿರರ್ಥಕವೆಂದು ಭಾವಿಸಬಾರದು; ಇದರಿಂದ ನೀವು ಬಾಳುವಿರಿ; ನೀವು ಯೊರ್ದನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ” ಎಂದು ಹೇಳಿದನು.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.


ಅದಕ್ಕೆ ಅಬ್ರಹಾಮನು, ‘ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ, ಅವುಗಳನ್ನು ಕೇಳಲಿ’ ಅನ್ನಲು,


ಸತ್ತು ಧೂಳಿನ ನೆಲದೊಳಗೆ ದೀರ್ಘ ನಿದ್ರೆಮಾಡುವವರಲ್ಲಿ ಅನೇಕರು ಎಚ್ಚೆತ್ತು ಕೆಲವರು ನಿತ್ಯಜೀವವನ್ನು, ಕೆಲವರು ನಿಂದನೆ ಮತ್ತು ನಿತ್ಯತಿರಸ್ಕಾರಗಳನ್ನು ಅನುಭವಿಸುವರು.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.


ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.


ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.


ಹೆರ್ಮೋನ್ ಪರ್ವತದಲ್ಲಿ ಹುಟ್ಟಿ, ಚೀಯೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆಯೂ ಇದೆ. ಅಲ್ಲಿ ಆಶೀರ್ವಾದವೂ, ಜೀವವೂ ಸದಾಕಾಲ ಇರಬೇಕೆಂದು, ಯೆಹೋವನು ಆಜ್ಞಾಪಿಸಿದ್ದಾನೆ.


ಸ್ತ್ರೀಯರು ಸತ್ತುಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಶ್ರೇಷ್ಠ ಪುನರುತ್ಥಾನವನ್ನು ಹೊಂದುವುದಕ್ಕೋಸ್ಕರ, ಬಿಡುಗಡೆಯನ್ನು ತಿರಸ್ಕರಿಸಿದರು.


“ರಹಸ್ಯವಾದವುಗಳು ನಮ್ಮ ದೇವರಾದ ಯೆಹೋವನವು; ಆದರೆ ಆತನಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.”


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ಆದರೂ ಜೀವ ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಮನಸ್ಸಿಲ್ಲ.


ಅದಕ್ಕೆ ಆತನು “ಮೋಶೆಯು ನಿಮಗೆ ಏನು ಆಜ್ಞೆ ಕೊಟ್ಟನು?” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು