Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ, “ನಿಜವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಈತನೇ” ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆತನು ಮಾಡಿದ ಈ ಸೂಚಕಕಾರ್ಯವನ್ನು ಆ ಜನರು ನೋಡಿ - ಲೋಕಕ್ಕೆ ಬರಬೇಕಾದ ಪ್ರವಾದಿ ಈತನೇ ನಿಜ ಎಂದು ಹೇಳಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೇಸು ಮಾಡಿದ ಈ ಸೂಚಕಕಾರ್ಯವನ್ನು ಕಂಡ ಜನರು, “ಈ ಲೋಕಕ್ಕೆ ಬರಲಿರುವ ಪ್ರವಾದಿ ನಿಜವಾಗಿಯೂ ಈತನೇ ಇರಬೇಕು” ಎಂದು ಹೇಳತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಜೆಜುನ್ ಕರಲ್ಲೆ ಹೆ ಅಜಾಪ್ ಬಗುನ್ ಥೈ ಹೊತ್ತ್ಯಾ ಲೊಕಾನಿ “ಹ್ಯೊ ಖರೆಚ್! ಹ್ಯಾ ಜಗಾತ್ ಯೆತಲೊ ಹೊತ್ತೊ ತೊ ಪ್ರವಾದಿ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:14
18 ತಿಳಿವುಗಳ ಹೋಲಿಕೆ  

ಅದಕ್ಕೆ ಆ ಗುಂಪಿನ ಜನರು, “ಈತನು ಗಲಿಲಾಯದ ನಜರೇತಿನ ಪ್ರವಾದಿಯಾದ ಯೇಸು” ಅಂದರು.


“ಆ ಮೋಶೆಯೇ, ‘ದೇವರು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮ್ಮೊಳಗೆ ಎಬ್ಬಿಸುವನು’ ಎಂದು ಇಸ್ರಾಯೇಲ್ ಜನರಿಗೆ ಹೇಳಿದನು.


“ಬರಬೇಕಾದವನು ನೀನೋ ಇಲ್ಲವೇ ನಾವು ಬೇರೊಬ್ಬನಿಗಾಗಿ ಕಾದು ನೋಡಬೇಕೋ” ಎಂದು ಅವರ ಮೂಲಕ ಹೇಳಿ ಕೇಳಿಸಿದನು.


ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.


ಅದಕ್ಕೆ ಅವರು, “ಹಾಗಾದರೆ ನೀನು ಯಾರು? ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ” ಅಂದನು. “ನೀನು ಬರಬೇಕಾದ ಆ ಪ್ರವಾದಿಯೋ?” ಎಂದು ಕೇಳಿದ್ದಕ್ಕೆ “ಅಲ್ಲ,” ಅಂದನು.


ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.


ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.


ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.


ಆ ಹೆಂಗಸು ಆತನಿಗೆ “ಮೆಸ್ಸೀಯನು (ಎಂದರೆ ಕ್ರಿಸ್ತನು) ಬರುತ್ತಾನೆಂದು ನಾನು ಬಲ್ಲೆನು. ಆತನು ಬಂದಾಗ ನಮಗೆ ಎಲ್ಲವನ್ನು ತಿಳಿಸಿಕೊಡುವನು” ಎಂದು ಹೇಳಲು,


ಆತನು ಅವರನ್ನು, “ಯಾವ ಸಂಗತಿಗಳು” ಎಂದು ಕೇಳಿದನು. ಅದಕ್ಕೆ ಅವರು, “ನಜರೇತಿನವನಾದ ಯೇಸುವಿನ ಸಂಗತಿಗಳೇ. ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಉನ್ನತನಾದ ಪ್ರವಾದಿಯಾಗಿದ್ದನು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಯೇಸು ಈ ಮೊದಲನೆಯ ಸೂಚಕ ಕಾರ್ಯವನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ, ತನ್ನ ಮಹಿಮೆಯನ್ನು ತೋರ್ಪಡಿಸಿದನು. ಇದರಿಂದ ಆತನ ಶಿಷ್ಯರು ಆತನಲ್ಲಿ ನಂಬಿಕೆಯಿಟ್ಟರು.


ಬಹು ಜನರು ಆತನು ರೋಗಿಗಳಲ್ಲಿ ಮಾಡಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ, ಜನರ ದೊಡ್ಡಗುಂಪು ಆತನನ್ನು ಹಿಂಬಾಲಿಸುತ್ತಿತ್ತು.


ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.


ಅವರು ಆತನನ್ನು “ಹಾಗಾದರೆ ನಾವು ನೋಡಿ ನಿನ್ನನ್ನು ನಂಬುವಂತೆ ಯಾವ ಸೂಚಕಕಾರ್ಯ ಮಾಡುತ್ತೀ? ನೀನು ಏನುಮಾಡುತ್ತಿ?


ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು