ಯೋಹಾನ 6:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಯೇಸು, ಅವರು ಬಂದು ತನ್ನನ್ನು ಹಿಡಿದುಕೊಂಡು ಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ತಿಳಿದುಕೊಂಡು ಪುನಃ ತಾನೊಬ್ಬನೇ ಬೆಟ್ಟಕ್ಕೆ ಹೋಗಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಯೇಸು - ಅವರು ಬಂದು ತನ್ನನ್ನು ಹಿಡುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂಬ ಯೋಚನೆಯಲ್ಲಿದ್ದಾರೆಂದು ತಿಳಿದುಕೊಂಡು ತಿರಿಗಿ ತಾನೊಬ್ಬನೇ ಒಂಟಿಗನಾಗಿ ಬೆಟ್ಟಕ್ಕೆ ಹೋಗಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ತನ್ನನ್ನು ಬಲವಂತದಿಂದ ರಾಜನನ್ನಾಗಿ ಮಾಡಲು ಜನರು ಯೋಚಿಸುತ್ತಿದ್ದಾರೆಂಬುದು ಯೇಸುವಿಗೆ ತಿಳಿದಿತ್ತು. ಆದ್ದರಿಂದ ಆತನು ಅಲ್ಲಿಂದ ತಾನೊಬ್ಬನೇ ಬೆಟ್ಟಕ್ಕೆ ಮತ್ತೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಲೊಕಾ ಬಳ್ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ. ಅಧ್ಯಾಯವನ್ನು ನೋಡಿ |