Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಯೇಸು ಅವರಿಗೆ, “ಭಯಪಡಬೇಡಿರಿ, ನಾನೇ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ಯೇಸು, “ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆದರೆ ಆತನು - ಅಂಜಬೇಡಿರಿ, ನಾನು, ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸು ಅವರಿಗೆ, “ಹೆದರಬೇಡಿರಿ, ನಾನೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜುನ್ ತೆಂಕಾ, “ಭಿಂವ್ನಕಾಶಿ, ಮಿಯಾ ತೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:20
11 ತಿಳಿವುಗಳ ಹೋಲಿಕೆ  

ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.


ಕೂಡಲೆ ಆತನು ಅವರನ್ನು ಮಾತನಾಡಿಸಿ ಅವರಿಗೆ, “ಧೈರ್ಯವಾಗಿರಿ, ನಾನೇ, ಹೆದರಬೇಡಿರಿ” ಎಂದು ಹೇಳಿದನು.


ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲ್ಪಟ್ಟಿದ್ದ ನಜರೇತಿನ ಯೇಸುವನ್ನು ಹುಡುಕುತ್ತಿರಲ್ಲವೇ. ಆತನು ಇಲ್ಲಿ ಇಲ್ಲ, ಜೀವಿತನಾಗಿ ಎದ್ದಿದ್ದಾನೆ; ಆತನನ್ನು ಇಟ್ಟಿದ್ದ ಸ್ಥಳ ಇದೇ ನೋಡಿರಿ,


ನೀನು ಭರ್ಜಿಯನ್ನೂ ಹಾಗೂ ಯುದ್ಧದ ಕೊಡಲಿಯನ್ನೂ ಹಿಡಿದು, ನನ್ನನ್ನು ಹಿಂದಟ್ಟುವ ವೈರಿಗಳನ್ನು ಎದುರಿಸು; “ನಾನೇ ನಿನ್ನ ರಕ್ಷಣೆ” ಎಂದು ಅಭಯಕೊಡು.


ಹೀಗಿರಲಾಗಿ ಅವರು ಹುಟ್ಟು ಹಾಕುತ್ತಾ ಸುಮಾರು ಒಂದು ಹರದಾರಿ ದೂರ ಹೋದ ಬಳಿಕ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯ ಸಮೀಪಕ್ಕೆ ಬರುವುದನ್ನು ನೋಡಿ ಭಯಪಟ್ಟರು.


ಆಗ ಆತನನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಆ ಕ್ಷಣವೇ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು