ಯೋಹಾನ 6:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದುಡಿಯಿರಿ; ಕೆಟ್ಟುಹೋಗುವ ಆಹಾರಕ್ಕಾಗಿ ದುಡಿಯಬೇಡಿರಿ, ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿ ದುಡಿಯಿರಿ; ಇಂಥ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ಇದಕ್ಕಾಗಿ ತಂದೆಯಾದ ದೇವರು ಆತನನ್ನು ನೇವಿುಸಿ ಮುದ್ರೆಹಾಕಿದ್ದಾನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಹಾಳ್ ಹೊವ್ನ್ ಜಾತಲ್ಯಾ ಜೆವ್ನಾಸಾಟ್ನಿ ರಾಬುನಕಾಶಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿತಲ್ಯಾ ಜೆವ್ನಾಸಾಟಿ ರಾಬಾ, ಹೆ ಜೆವಾನ್ ತುಮ್ಕಾ ಮಾನ್ಸಾಚೊ ಲೆಕ್ ದಿತಾ, ಕಶ್ಯಾಕ್ ಮಟ್ಲ್ಯಾರ್ ಸರ್ಗಾ ವೈಲ್ಯಾ ಬಾಬಾನ್ ತ್ಯೆಚ್ಯಾವರ್ತಿ ಛಪ್ಪೊ ಮಾರುನ್ ಥವ್ಲ್ಯಾನಾಯ್” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |