Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯೇಸುವು, “ದೇವರ ಕ್ರಿಯೆ ಯಾವುದೆಂದರೆ, ಆತನು ಕಳುಹಿಸಿಕೊಟ್ಟಾತನನ್ನು ನೀವು ನಂಬುವುದೇ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯೇಸು - ದೇವರು ಮೆಚ್ಚುವ ಕೆಲಸ ಯಾವದಂದರೆ ಆತನು ಕಳುಹಿಸಿಕೊಟ್ಟವನನ್ನು ನೀವು ನಂಬುವದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೇಸು, “ದೇವರು ಕಳುಹಿಸಿದಾತನನ್ನು ನೀವು ನಂಬಬೇಕು. ಈ ಕಾರ್ಯವನ್ನೇ ದೇವರು ನಿಮ್ಮಿಂದ ಅಪೇಕ್ಷಿಸುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಜೆಜುನ್ ತೆಂಕಾ, “ದೆವಾಕ್ ಪಾಜೆ ಹೊಲ್ಲೆ ಕಾಯ್ ಮಟ್ಲ್ಯಾರ್ ತೆನಿ ಧಾಡುನ್ ದಿಲ್ಲ್ಯಾಚ್ಯಾ ವರ್ತಿ ವಿಶ್ವಾಸ್, ಕರ್‍ತಲೆ” ಮನುನ್ ಜಬಾಬ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:29
21 ತಿಳಿವುಗಳ ಹೋಲಿಕೆ  

ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”


ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.


ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆ ಹೊಂದುವನು; ನಂಬದೇ ಹೋಗುವವನು ದಂಡನೆಗೆ ಗುರಿಯಾಗುವನು.


ಧರ್ಮಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ತಿಳಿದು ಅವುಗಳನ್ನು ಪರಿಶೋಧಿಸುತ್ತಿರಾ? ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿ ಕೊಡುವವುಗಳಾಗಿವೆ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಅವರು ಆತನಿಗೆ “ದೇವರ ಕ್ರಿಯೆಗಳನ್ನು ನಾವು ಮಾಡಬೇಕಾದರೆ ಏನು ಮಾಡಬೇಕೆಂದು” ಕೇಳಿದ್ದಕ್ಕೆ,


ನಾನು ನನ್ನ ಸ್ವಂತ ಚಿತ್ತದಂತೆ ಮಾಡುವುದಕ್ಕಾಗಿ ಬಂದಿಲ್ಲ, ಆದರೆ, ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ನೆರವೇರಿಸುವುದಕ್ಕೆ ಪರಲೋಕದಿಂದ ಇಳಿದು ಬಂದಿರುವೆ.


ಜೀವವುಳ್ಳ ತಂದೆಯು ನನ್ನನ್ನು ಅಧಿಕಾರದೊಂದಿಗೆ ಕಳುಹಿಸಿಕೊಟ್ಟಿದ್ದಾನೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುತ್ತೇನೆ, ಅದರಂತೆ ನನ್ನನ್ನು ತಿನ್ನುವವನೂ ನನ್ನ ನಿಮಿತ್ತವಾಗಿಯೇ ಜೀವಿಸುವನು.


ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.


ಯಾವನು ಜಯಶಾಲಿಯಾಗಿ ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೆಯವರೆಗೂ ನಡಿಸುತ್ತಾನೋ, ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು. ‘ಅವನು ಕಬ್ಬಿಣದ ಕೋಲಿನಿಂದ ಅವರನ್ನು ಆಳುವನು, ಮಣ್ಣಿನ ಮಡಿಕೆಗಳು ಒಡೆಯುವಂತೆ ಅವರ ಬಲ ಮುರಿದು ಹೋಗುವುದು.’ ಇದಲ್ಲದೆ ಉದಯ ನಕ್ಷತ್ರವನ್ನು ಅವನಿಗೆ ಕೊಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು