Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಮ್ಮ ಪೂರ್ವಿಕರು ಅರಣ್ಯದಲ್ಲಿ ಮನ್ನಾ ತಿಂದರು. ‘ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವುದಕ್ಕೆ ಕೊಟ್ಟನು’ ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲಾ” ಎಂದು ಕೇಳಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಮ್ಮ ಹಿರಿಯರು ಅಡವಿಯಲ್ಲಿ ಮನ್ನಾ ತಿಂದರು; ಪರಲೋಕದಿಂದ ರೊಟ್ಟಿಯನ್ನು ಅವರಿಗೆ ತಿನ್ನುವದಕ್ಕೆ ಕೊಟ್ಟನು ಎಂದು ಶಾಸ್ತ್ರದಲ್ಲಿ ಬರೆದದೆಯಲ್ಲಾ, ನೀನು ಏನು ಕೆಲಸ ನಡಿಸುತ್ತೀ? ಎಂದು ಕೇಳಿದಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಮ್ಮ ಪಿತೃಗಳು ತಮಗೆ ದೇವರು ಮರುಭೂಮಿಯಲ್ಲಿ ಕೊಟ್ಟ ಮನ್ನವನ್ನು (ಆಹಾರವನ್ನು) ತಿಂದರು. ‘ದೇವರು ಅವರಿಗೆ ತಿನ್ನಲು ಪರಲೋಕದಿಂದ ರೊಟ್ಟಿಯನ್ನು ಕೊಟ್ಟನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಪವಿತ್ರ್ ಪುಸ್ತಕಾತ್ “ತೆನಿ ತೆಂಕಾ ಸರ್‍ಗಾ ವೈನಾ ಬಾಕ್ರಿ ದಿಲ್ಯಾನ್, ಅನಿ ತೆನಿ ಖಾಲ್ಯಾನಿ ಮಟ್ಲ್ಯಾ ಸರ್ಕೆ ಅಮ್ಚ್ಯಾ ಅದ್ಲ್ಯಾ ಲೊಕಾನಿ ಮರುಭುಮಿತ್ ಮನ್ನಾ ಖಾಲ್ಯಾನಿ”. ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:31
14 ತಿಳಿವುಗಳ ಹೋಲಿಕೆ  

ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.


ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.


ನಿಮ್ಮ ಪೂರ್ವಿಕರು ಅಡವಿಯಲ್ಲಿ ಮನ್ನಾ ತಿಂದರೂ ಸತ್ತು ಹೋದರು.


ಇಸ್ರಾಯೇಲರು ತಾವು ವಾಸಮಾಡಲಿರುವ ಪ್ರದೇಶಕ್ಕೆ ಬರುವವರೆಗೆ ಅಂದರೆ ಕಾನಾನ್ ದೇಶವನ್ನು ಬಂದು ಸೇರುವವರೆಗೆ ನಲ್ವತ್ತು ವರ್ಷ ಮನ್ನವನ್ನೇ ಊಟಮಾಡಿದರು.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು. ಇದಲ್ಲದೆ ಅವನಿಗೆ ಬಿಳೀಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಮತ್ತಾರಿಗೂ ತಿಳಿಯದು.


ಅವರನ್ನು ಉಪದೇಶಿಸಲು ನೀನು ನಿನ್ನ ಒಳ್ಳೆಯ ಆತ್ಮನನ್ನು ಕೊಟ್ಟೆ. ಅವರ ಬಾಯಿಂದ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದಾಗ ಅವರಿಗೆ ನೀರನ್ನು ಕೊಟ್ಟೆ.


ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.


ಅವರೆಲ್ಲರೂ ಆತ್ಮೀಕವಾದ ಒಂದೇ ಆಹಾರವನ್ನು ತಿಂದರು.


ಪರಲೋಕದಿಂದ ಇಳಿದು ಬಂದ ರೊಟ್ಟಿಯು ಇದೇ, ನಿಮ್ಮ ಪೂರ್ವಿಕರು ಮನ್ನಾವನ್ನು ತಿಂದರೂ ಸತ್ತರು, ಆದರೆ, ಈ ರೊಟ್ಟಿಯನ್ನು ತಿನ್ನುವವನು ಸದಾಕಾಲಕ್ಕೂ ಜೀವಿಸುವನು” ಎಂದು ಹೇಳಿದನು.


ಆ ದೇಶದ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ತಿರುಗಿ ಸಿಕ್ಕಲೇ ಇಲ್ಲ. ಇಸ್ರಾಯೇಲ್ಯರು ಆ ವರ್ಷವೆಲ್ಲ ಕಾನಾನ್ ದೇಶದ ಉತ್ಪನ್ನವನ್ನೇ ಅನುಭವಿಸಿದರು.


ಯೇಸು ಅವರಿಗೆ “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಮೋಶೆಯು ನಿಮಗೆ ಪರಲೋಕದಿಂದ ರೊಟ್ಟಿ ಕೊಟ್ಟವನಲ್ಲ, ನನ್ನ ತಂದೆಯು ಪರಲೋಕದಿಂದ ಬರುವ ನಿಜವಾದ ರೊಟ್ಟಿಯನ್ನು ನಿಮಗೆ ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು