Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:44 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಎಳೆದ ಹೊರತು ಯಾವನೂ ನನ್ನ ಬಳಿಗೆ ಬರಲಾರನು; ಮತ್ತು ನಾನು ಅವನನ್ನು ಕಡೇದಿನದಲ್ಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 ಬಾಬಾನ್ ಮಾಜ್ಯಾ ಕಡೆ ಯೆಯ್ ಸರ್ಕೆ ಕರ್ಲ್ಯಾ ಶಿವಾಯ್ ಕೊನಾಕ್ಬಿ ಮಾಜಾಕ್ಡೆ ಯೆವ್ಕ್ ಹೊಯ್ನಾ: ಅನಿ ಮಿಯಾ ತೆಕಾ ಆಕ್ರಿಚ್ಯಾ ದಿಸಿ ಝಿತ್ತೆ ಕರುನ್ ಉಟ್ವುತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:44
22 ತಿಳಿವುಗಳ ಹೋಲಿಕೆ  

ಆತನು “ತಂದೆಯು ಅನುಗ್ರಹಿಸದ ಹೊರತು ಯಾರೂ ನನ್ನ ಬಳಿಗೆ ಬರಲಾರರು ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ,” ಎಂದನು.


ಆದರೆ ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು.


ಅದಕ್ಕೆ ಯೇಸು, “ಯೋನನ ಮಗನಾದ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದು ಮನುಷ್ಯನಿಂದ ನಿನಗೆ ಪ್ರಕಟವಾಗಿಲ್ಲ, ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನೂ ನಿನಗೆ ಪ್ರಕಟಪಡಿಸಿರುವನು” ಎಂದು ಹೇಳಿದನು.


‘ಅವರೆಲ್ಲರೂ ದೇವರಿಂದಲೇ ಬೋಧಿಸಲ್ಪಡುವರು’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬನೂ ನನ್ನ ಬಳಿಗೆ ಬರುತ್ತಾರೆ.


‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,


ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?


ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.


ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.


ಕ್ರಿಸ್ತನ ಮೇಲೆ ನಂಬಿಕೆಯಿಡುವುದು ಮಾತ್ರವಲ್ಲ ಆತನಿಗೋಸ್ಕರ ಬಾಧೆಯನ್ನನುಭವಿಸುವುದು ನಿಮಗೆ ವರವಾಗಿ ದೊರಕಿದೆ.


ನನ್ನನ್ನು ನಿನ್ನಡೆಗೆ ಸೆಳೆದುಕೋ; ನಿನ್ನ ಹಿಂದೆ ಓಡಿ ಬರುವೆನು; ರಾಜನು ನನ್ನನ್ನು ಅಂತಃಪುರಕ್ಕೆ ಬರಮಾಡಿದ್ದಾನೆ; ನಿನ್ನಲ್ಲಿ ಹರ್ಷಿಸಿ ಉಲ್ಲಾಸಿಸುವೆವು, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತಲೂ ಉತ್ತಮವಾದುದು; ಸ್ತ್ರೀಯರು ನಿನ್ನನ್ನು ಯಥಾರ್ಥವಾಗಿ ಪ್ರೀತಿಸುವರು.


ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.


ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.


ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು.


ಅದಕ್ಕೆ ಯೇಸು ಅವರಿಗೆ, “ನಿಮ್ಮ ನಿಮ್ಮೊಳಗೆ ಗೊಣಗುಟ್ಟುವುದನ್ನು ನಿಲ್ಲಿಸಿರಿ” ಎಂದು ಉತ್ತರ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು