Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಬಹು ಜನರ ಗುಂಪು ತನ್ನ ಬಳಿಗೆ ಬರುವದನ್ನು ಕಂಡು - ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡುತರೋಣ? ಎಂದು ಫಿಲಿಪ್ಪನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೇಸು ಕಣ್ಣೆತ್ತಿ ನೋಡಿದಾಗ, ತನ್ನ ಬಳಿಗೆ ಬರುತ್ತಿದ್ದ ಜನಸಮೂಹವನ್ನು ಕಂಡು ಫಿಲಿಪ್ಪನಿಗೆ, “ಈ ಜನರಿಗೆಲ್ಲಾ ಸಾಕಾಗುವಷ್ಟು ರೊಟ್ಟಿಯನ್ನು ನಾವು ಎಲ್ಲಿ ಕೊಂಡುಕೊಳ್ಳೋಣ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜುನ್ ಅಪ್ನಾಕ್ಡೆ ಯೆತಲ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಬಗಟ್ಲ್ಯಾನ್ ತಸೆಮನುನ್ ತೆನಿ ಫಿಲಿಪಾಕ್, “ಹ್ಯಾ ಸಗ್ಳ್ಯಾ ಲೊಕಾಕ್ನಿ ಪಾವಿ ಸರ್ಕೆ ಜೆವಾನ್ ಅಮಿ ಖೈತ್ನಾ ಇಕಾತ್ ಹಾನುಕ್ ಹೊತಾ?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:5
14 ತಿಳಿವುಗಳ ಹೋಲಿಕೆ  

ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.


‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುವುದೆಂದು ನೀವು ಹೇಳುವುದುಂಟಷ್ಟೆ’? ಇಗೋ, ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ಹೊಲಗಳನ್ನು ನೋಡಿರಿ. ಅವು ಬಲಿತು ಬೆಳ್ಳಗಾಗಿ ಕೊಯ್ಲಿಗೆ ಸಿದ್ಧವಾಗಿದೆಯೆಂದು ನಿಮಗೆ ಹೇಳುತ್ತೇನೆ.


ಮರುದಿನ ಯೇಸು ಗಲಿಲಾಯಕ್ಕೆ ಹೋಗಬೇಕೆಂದಿರುವಾಗ ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು” ಎಂದನು.


ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು?


ಆಗ ಅವರು ತಾವಾಗಿಯೇ ದೋಣಿಯಲ್ಲಿ ಹೊರಟು ಏಕಾಂತ ಸ್ಥಳಕ್ಕೆ ಹೋದರು.


ಇತ್ತಲಾಗಿ ಅಪೊಸ್ತಲರು ಹಿಂತಿರುಗಿ ಬಂದು ತಾವು ಮಾಡಿದ್ದನ್ನೆಲ್ಲಾ ಯೇಸುವಿಗೆ ವಿವರವಾಗಿ ಹೇಳಿದರು. ಆತನು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೇತ್ಸಾಯಿದವೆಂಬ ಊರಿಗೆ ಹೋದರು.


ಈ ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರರ ಪಟ್ಟಣವಾದ ಬೆತ್ಸಾಯಿದದವನಾಗಿದ್ದನು.


ಫಿಲಿಪ್ಪನು ನತಾನಯೇಲನನ್ನು ಕಂಡು ಅವನಿಗೆ “ಮೋಶೆಯು ಧರ್ಮಶಾಸ್ತ್ರದಲ್ಲಿ ಯಾರ ವಿಷಯವಾಗಿ ಬರೆದನೋ ಮತ್ತು ಪ್ರವಾದಿಗಳು ಯಾರ ವಿಚಾರವಾಗಿ ಬರೆದರೋ ಆತನು ನಮಗೆ ಸಿಕ್ಕಿದನು, ಆತನು ಯಾರೆಂದರೆ ಯೋಸೇಫನ ಮಗನಾದ ನಜರೇತಿನ ಯೇಸುವೇ” ಎಂದು ಹೇಳಿದನು.


ನತಾನಯೇಲನು “ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ಕೇಳಲು, ಫಿಲಿಪ್ಪನು “ಬಂದು ನೋಡು,” ಅಂದನು.


ಅದಕ್ಕೆ ನತಾನಯೇಲನು “ನೀನು ನನ್ನನ್ನು ಹೇಗೆ ಬಲ್ಲೆ?” ಎಂದು ಯೇಸುವನ್ನು ಕೇಳಿದ್ದಕ್ಕೆ ಆತನು “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮೊದಲೇ ನೀನು ಆ ಅಂಜೂರದ ಮರದ ಕೆಳಗಿರುವುದನ್ನು ನಾನು ನೋಡಿದೆನು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು