Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:61 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

61 ತನ್ನ ಶಿಷ್ಯರು ಇದಕ್ಕೆ ಗೊಣಗುಟ್ಟುತ್ತಾರೆಂದು ಯೇಸು ತನ್ನಲ್ಲಿ ತಿಳಿದುಕೊಂಡು ಅವರಿಗೆ “ಈ ಮಾತಿನಿಂದ ನಿಮಗೆ ಬೇಸರವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

61 ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

61 ಯೇಸು ತನ್ನ ಶಿಷ್ಯರು ಇದಕ್ಕೆ ಗುಣುಗುಟ್ಟುತ್ತಾರೆಂದು ತನ್ನಲ್ಲಿ ತಿಳುಕೊಂಡು ಅವರಿಗೆ - ಈ ಮಾತಿನಿಂದ ನಿಮಗೆ ಬೇಸರವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

61 ತನ್ನ ಶಿಷ್ಯರು ಆಕ್ಷೇಪಿಸುತ್ತಿರುವುದನ್ನು ತಿಳಿದಿದ್ದ ಯೇಸು, “ಈ ಉಪದೇಶದಿಂದ ನಿಮಗೆ ಬೇಸರವಾಯಿತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

61 ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

61 ಹೆಚ್ಯಾ ವಿಶಯಾತ್ ಅಪ್ನಾಚಿ ಶಿಸಾ ಪುರ್ಪುರುಲಾಲ್ಯಾತ್ ಮನುನ್ ಜೆಜುಕ್ ಕಳಲ್ಲೆ, ತನ್ನಾ ತೆನಿ ತೆಂಕಾ “ಹೆ ತುಮ್ಕಾ ಆಯ್ಕುನ್ ತರಾಸ್ ಹೊವ್ನ್ ಮಾಕಾ ಸೊಡುನ್ ಜಾಯ್ ಸರ್ಕೆ ಕರುಕ್ ಲಾಗ್ಲಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:61
8 ತಿಳಿವುಗಳ ಹೋಲಿಕೆ  

ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ” ನಂಬದವರು ಯಾರೆಂದೂ ಹಾಗೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.


ಯೇಸು ಮೂರನೆಯ ಸಾರಿ, “ಯೋಹಾನನ ಮಗನಾದ ಸೀಮೋನನೇ ನೀನು ನನ್ನ ಮೇಲೆ ಮಮತೆ ಇಟ್ಟಿದ್ದಿಯೋ?” ಎಂದು ಕೇಳಿದನು, ಮೂರನೆಯ ಸಾರಿ ಆತನು, “ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿನಗೆ ಎಲ್ಲವೂ ತಿಳಿದಿದೆ. ನಾನು ನಿನ್ನ ಮೇಲೆ ಮಮತೆ ಇಟ್ಟೀದ್ದೇನೆಂದು ನಿನಗೆ ತಿಳಿದಿದೆ” ಎಂದನು. ಆಗ ಅವನಿಗೆ ಯೇಸು “ನನ್ನ ಕುರಿಗಳನ್ನು ಮೇಯಿಸು” ಎಂದನು.


ನನ್ನ ವಿಷಯದಲ್ಲಿ ಆಪಾದಿಸದವನೇ ಧನ್ಯನು” ಎಂದು ಹೇಳಿದನು.


ಆದರೂ ನಾವು ಅವರಿಗೆ ಅಡ್ಡಿಯಾಗದಂತೆ, ನೀನು ಸಮುದ್ರಕ್ಕೆ ಹೋಗಿ ಗಾಳವನ್ನು ಹಾಕಿ ಮೊದಲು ಸಿಕ್ಕುವ ಮೀನನ್ನು ಹಿಡಿದು, ಅದರ ಬಾಯಿ ತೆರೆದು ನೋಡು ಅದರಲ್ಲಿ ಒಂದು ಬೆಳ್ಳಿ ನಾಣ್ಯ ಸಿಕ್ಕುವುದು. ಅದನ್ನು ತೆಗೆದುಕೊಂಡು ನನಗೋಸ್ಕರ ಮತ್ತು ನಿನಗೋಸ್ಕರ ತೆರಿಗೆ ಹಣ ಕೊಡು” ಎಂದು ಹೇಳಿದನು.


ಯೇಸುವು ಇದನ್ನು ಕುರಿತು ತನ್ನನ್ನು ಕೇಳಬೇಕೆಂದಿದ್ದಾರೆಂದು ತಿಳಿದು ಅವರಿಗೆ, “ಸ್ವಲ್ಪ ಕಾಲವಾದ ಮೇಲೆ ನಾನು ನಿಮಗೆ ಕಾಣಿಸುವುದಿಲ್ಲ, ಇನ್ನು ಸ್ವಲ್ಪ ಕಾಲವಾದ ಮೇಲೆ ನನ್ನನ್ನು ನೋಡುವಿರಿ, ಎಂದು ನಾನು ನಿಮಗೆ ಹೇಳಿದ್ದಕ್ಕೆ ನೀವು ನಿಮ್ಮನಿಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದೀರಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು