Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 6:68 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

68 ಸೀಮೋನ್ ಪೇತ್ರನು ಆತನಿಗೆ “ಕರ್ತನೇ, ನಾವು ಯಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವದ ವಾಕ್ಯಗಳಿವೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

68 ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

68 ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

68 ಸೀಮೋನ್ ಪೇತ್ರನು ಯೇಸುವಿಗೆ, “ಪ್ರಭುವೇ, ನಾವೆಲ್ಲಿಗೆ ಹೋಗೋಣ? ನಿತ್ಯಜೀವವನ್ನು ಕೊಡುವ ಸಂಗತಿಗಳು ನಿನ್ನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

68 ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

68 ತನ್ನಾ ಸಿಮಾವ್ ಪೆದ್ರುನ್,“ಧನಿಯಾ ಅಮಿ ಕೊನಾಕ್ಡೆ ಜಾತಲೆ? ಕನ್ನಾಚ್ ಮರಾನ್ ನಸಲ್ಲೊ ಜಿವ್ ದಿತಲಿ ಶಬ್ದಾ ತುಜೆಕ್ಡೆ ಎವ್ಡೆಚ್ ಹಾತ್”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 6:68
17 ತಿಳಿವುಗಳ ಹೋಲಿಕೆ  

ಪರಲೋಕದಲ್ಲಿ ನನಗೆ ನೀನಲ್ಲದೆ ಮತ್ತಾರು ಅವಶ್ಯ? ಇಹಲೋಕದಲ್ಲಿ ನಿನ್ನನ್ನಲ್ಲದೆ ಇನ್ನಾರನ್ನೂ ಬಯಸುವುದಿಲ್ಲ.


ನಿಮಗೆ ನಿಜನಿಜವಾಗಿ ಹೇಳುತ್ತೇನೆ ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದಾತನನ್ನು ನಂಬುವವನು ನಿತ್ಯ ಜೀವವನ್ನು ಹೊಂದಿದ್ದಾನೆ, ಅವನು ಖಂಡನೆಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದಾನೆ.


ಬರಬೇಕಾದ ರಕ್ಷಣೆಯು ಇನ್ನಾರಲ್ಲಿಯೂ ಸಿಗುವುದಿಲ್ಲ; ಆ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರಿಗೆ ಕೊಟ್ಟಿರುವ ಮತ್ತ್ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.


“ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು.


ಅವನೇ ಸೀನಾಯಿಬೆಟ್ಟದಲ್ಲಿ, ತನ್ನೊಡನೆ ಮಾತನಾಡಿದ ದೇವದೂತನಿಗೂ ನಮ್ಮ ಪೂರ್ವಿಕರಿಗೂ ಅಡವಿಯಲ್ಲಿದ್ದ ಸಭೆಯೊಳಗೆ ಇದ್ದು ಜೀವಕರವಾದ ದೈವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು ಆಗಿದ್ದಾನೆ.


ಜೀವ ಕೊಡುವುದು ಆತ್ಮವೇ. ದೇಹವು ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ, ಜೀವವಾಗಿಯೂ ಇವೆ.


ಆಗ ಸೀಮೋನ ಪೇತ್ರನು, “ನೀನು ಜೀವವುಳ್ಳ ದೇವರ ಕುಮಾರನಾದ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಮಗನನ್ನು ನೋಡಿ ತಂದೆಯಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ತಂದೆಯ ಚಿತ್ತವಾಗಿದೆ, ಮತ್ತು ನಾನು ಕಡೆ ದಿನದಲ್ಲಿ ಅವನನ್ನು ಎಬ್ಬಿಸುವೆನು” ಎಂದು ಹೇಳಿದನು.


ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.


ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.


ಯೇಸು ಅವರನ್ನು, “ಆದರೆ ನೀವು ನನ್ನನ್ನು ಯಾರು ಅನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ದೇವರಿಂದ ಬರಬೇಕಾಗಿರುವ ಕ್ರಿಸ್ತನು” ಎಂದು ಉತ್ತರ ಕೊಟ್ಟನು.


ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ.


ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು