Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ನ್ಯಾಯಬದ್ಧವಾಗಿ ತೀರ್ಪುನ್ನು ಮಾಡಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಹೊರತೋರಿಕೆಯ ಆಧಾರದ ಮೇಲೆ ತೀರ್ಪುಮಾಡದೆ ನ್ಯಾಯಾನುಸಾರವಾಗಿ ತೀರ್ಪುಮಾಡಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಭಾಯ್ಲೆ ಬಗುನ್ ನಿತ್ ಕರುನಕಾಶಿ, ಖರೆಪಾನಾನ್ ನಿತ್ ಕರಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:24
17 ತಿಳಿವುಗಳ ಹೋಲಿಕೆ  

ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.


ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.


ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.


ದುಷ್ಟನನ್ನು ಶಿಷ್ಟನೆಂದು, ಶಿಷ್ಟನನ್ನು ದುಷ್ಟನೆಂದು ನಿರ್ಣಯಿಸುವವರಿಬ್ಬರೂ ಯೆಹೋವನಿಗೆ ಅಸಹ್ಯರು.


ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?


“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.


ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ!


“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.


“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,


ಆಮೇಲೆ ಯೆರೂಸಲೇಮಿನವರಲ್ಲಿ ಕೆಲವರು “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?


ನೀವು ಬಾಹ್ಯವಾದುದ್ದುನ್ನು ಮಾತ್ರ ನೋಡುತ್ತೀರಿ. ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ಒಪ್ಪಿಕೊಂಡರೆ ಅವನು ಆಲೋಚನೆಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು