Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 7:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಆತನ ಸಹೋದರರು ಆತನಿಗೆ “ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರೂ ಸಹ ನೋಡುವಂತೆ, ಇಲ್ಲಿಂದ ಹೊರಟು, ಯೂದಾಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನ ತಮ್ಮಂದಿರು ಆತನಿಗೆ - ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದ್ದರಿಂದ ಯೇಸುವಿನ ಸಹೋದರರು ಆತನಿಗೆ, “ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಆಗ ಅಲ್ಲಿರುವ ನಿನ್ನ ಹಿಂಬಾಲಕರು ನೀನು ಮಾಡುವ ಅದ್ಭುತಕಾರ್ಯಗಳನ್ನು ನೋಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆಮನುನ್ ತೆಚ್ಯಾ ಭಾವಾನಿ ತೆಕಾ “ತಿಯಾ ಹಿತ್ತೆತ್ನಾ ಭಾಯ್ರ್ ಜಾವ್ನ್ ಜುದೆಯಾಕ್ ಚಲ್ ಅಶೆಚ್ ತಿಯಾ ಕರ್‍ತೆ ತಿ ಅಜಾಪಾ ತುಜ್ಯಾ ಫಾಟ್ನಾ ಹೊತ್ತಿ ಲೊಕಾ ಬಗ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 7:3
17 ತಿಳಿವುಗಳ ಹೋಲಿಕೆ  

ಯೇಸು ಜನರ ಗುಂಪುಗಳ ಸಂಗಡ ಇನ್ನೂ ಮಾತನಾಡುತ್ತಿರುವಾಗ ಆತನ ತಾಯಿಯೂ ತಮ್ಮಂದಿರೂ ಆತನನ್ನು ಮಾತನಾಡಿಸಬೇಕೆಂದು ಹೊರಗೆ ಬಂದು ನಿಂತಿದ್ದರು.


ಏಕೆಂದರೆ ಆತನ ಸಹೋದರರು ಸಹ ಆತನನ್ನು ನಂಬಲಿಲ್ಲ.


ಆಗ ಪೇತ್ರನು ಹನ್ನೊಂದು ಮಂದಿ ಅಪೊಸ್ತಲರ ಸಹಿತ ಎದ್ದು ನಿಂತು ಗಟ್ಟಿಯಾದ ಧ್ವನಿಯಿಂದ ಅವರಿಗೆ ಹೀಗೆ ಬೋಧನೆಮಾಡಿದನು; “ಯೆಹೂದ್ಯರೇ, ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಜಾತಿ-ಜನಾಂಗದವರೇ, ಈ ಸಂಗತಿಯು ಏನೆಂದು ನೀವು ತಿಳಿದುಕೊಳ್ಳಲು ನನ್ನ ಮಾತಿಗೆ ಕಿವಿಗೊಡಿರಿ.


ಆದರೆ ಆತನ ಸಹೋದರರು ಹೋದ ಮೇಲೆ ಆತನು ಸಹ ಹಬ್ಬಕ್ಕೆ ಬಹಿರಂಗವಾಗಿ ಹೋಗದೆ, ರಹಸ್ಯವಾಗಿ ಹೋದನು.


ಯೇಸುವಿನ ತಾಯಿಯೂ ತಮ್ಮಂದಿರೂ ಆತನಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಆತನ ಬಳಿಗೆ ಹೋಗಲಾರದೆ ಇದ್ದರು.


ಜನರು ಯೇಸುವಿನ ಸುತ್ತಲು ಕುಳಿತುಕೊಂಡಿದ್ದಾಗ ಆತನ ತಾಯಿಯೂ, ತಮ್ಮಂದಿರೂ ಬಂದು ಹೊರಗೆ ನಿಂತುಕೊಂಡು ಆತನನ್ನು ಕರೆಕಳುಹಿಸಿದರು.


ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.


ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.


ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.


ಇದನ್ನು ಕೇಳಿ ಆತನ ಬಂಧುಗಳು “ಅವನಿಗೆ ಹುಚ್ಚುಹಿಡಿದಿದೆ” ಎಂದು ಹೇಳಿ ಆತನನ್ನು ಹಿಡಿಯುವುದಕ್ಕೆ ಹೊರಟರು.


ಯೇಸುವನ್ನೂ ಆತನ ಶಿಷ್ಯರನ್ನೂ ಸಹ ಮದುವೆಗೆ ಕರೆದಿದ್ದರು.


ಯೇಸುವಿನ ಶಿಷ್ಯರಲ್ಲಿ ಅನೇಕರು ಇದನ್ನು ಕೇಳಿ “ಇದು ಕಠಿಣವಾದ ಮಾತು, ಇದನ್ನು ಪಾಲಿಸುವವರು ಯಾರು?” ಎಂದು ಮಾತನಾಡಿಕೊಂಡರು.


ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಆತನನ್ನು ಬಿಟ್ಟು ಹೊರಟುಹೋದರು ಮತ್ತು ಆತನ ಜೊತೆಯಲ್ಲಿ ಸಂಚಾರ ಮಾಡುವುದನ್ನು ಬಿಟ್ಟರು.


ಪ್ರಸಿದ್ಧಿಗೆ ಬರಬೇಕೆಂದಿರುವವನು ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದರಿಂದ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ” ಎಂದು ಹೇಳಿದರು.


ಜನರು ಆತನಿಗೆ, “ನಿನ್ನ ತಾಯಿಯು, ನಿನ್ನ ಸಹೋದರರು ನಿನ್ನನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ” ಎಂದು ಹೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು