ಯೋಹಾನ 7:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬುದಾಗಿ ಪವಿತ್ರ ಗ್ರಂಥವು ಹೇಳುತ್ತದಲ್ಲವೇ?” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಕ್ರಿಸ್ತನು ದಾವೀದನ ಕುಟುಂಬದವನೆಂತಲೂ ದಾವೀದನು ವಾಸಿಸಿದ ಬೆತ್ಲೆಹೇಮ್ ಊರಿನಿಂದ ಆತನು ಬರುತ್ತಾನೆಂತಲೂ ಪವಿತ್ರ ಗ್ರಂಥವು ತಿಳಿಸುತ್ತದೆ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಪವಿತ್ರ್ ಪುಸ್ತಕ್ ಮನ್ತಾ “ಮೆಸ್ಸಿಯಾ ದಾವಿದ್ ರಾಜಾಚ್ಯಾ ಘರಾನ್ಯಾಚೊ ಅನಿ ತೊ ದಾವಿದಾನ್ ಜಿವನ್ ಕರಲ್ಲ್ಯಾ ಬೆತ್ಲೆಹೆಮಾತ್ ಉಪಾಜ್ತಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.