Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅದಕ್ಕೆ ಆಕೆಯು “ಕರ್ತನೇ, ಯಾರೂ ಶಿಕ್ಷೆ ವಿಧಿಸಲಿಲ್ಲ” ಎಂದಳು. ಯೇಸು ಆಕೆಗೆ “ನಾನೂ ಸಹ ನಿನ್ನನ್ನು ಶಿಕ್ಷೆ ವಿಧಿಸುವುದಿಲ್ಲ, ಹೋಗು, ಇನ್ನು ಮುಂದೆ ಪಾಪಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತಿನಿ, “ನಾ, ಕೊನ್ಬಿ ನಾ ಸಾಯ್ಬಾ” ಮನುನ್ ಜಬಾಬ್ ದಿಲಿನ್, ತನ್ನಾ ಜೆಜುನ್ ತಿಕಾ “ತಸೆಜಾಲ್ಯಾರ್ ಮಿಯಾಬಿ ತುಕಾ ಚುಕಿದಾರ್ ಮನಿನಾ ಜಾ, ಖರೆ ಅನಿ ಫಿಡೆ ಪಾಪ್ ಕರುನಕೊ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:11
27 ತಿಳಿವುಗಳ ಹೋಲಿಕೆ  

ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.


ಇದಾದ ಮೇಲೆ ಯೇಸು ಅವನನ್ನು ದೇವಾಲಯದಲ್ಲಿ ಕಂಡು, “ನಿನಗೆ ಸ್ವಸ್ಥವಾಯಿತಲ್ಲಾ; ಇನ್ನು ಮೇಲೆ ಪಾಪ ಮಾಡಬೇಡ, ನಿನಗೆ ಹೆಚ್ಚಿನ ಕೇಡು ಬಂದೀತು” ಎಂದನು.


ನೀವು ಶಾರೀರಿಕ ರೀತಿಯಲ್ಲಿ ತೀರ್ಪು ಮಾಡುತ್ತೀರಿ, ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.


ನಾನು ನೀತಿವಂತರನ್ನಲ್ಲ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ಪಾಪಿಗಳನ್ನು ಕರೆಯುವುದಕ್ಕೆ ಬಂದಿದ್ದೇನೆ” ಎಂದು ಅವರಿಗೆ ಉತ್ತರಕೊಟ್ಟನು.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಮನುಷ್ಯನು ದೇವರನ್ನು ಕುರಿತು, ‘ನಾನು ಕೆಟ್ಟದ್ದನ್ನು ಮಾಡದಿದ್ದರೂ ದಂಡನೆಯನ್ನು ಸಹಿಸಿಕೊಂಡಿದ್ದೇನೆ,


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.


ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವುದೆಂದು ನಿಮಗೆ ಹೇಳುತ್ತೇನೆ” ಅಂದನು.


ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.


ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.


ಅಲ್ಲಿ ಯಾಜಕಸೇವೆಯನ್ನು ಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಲು ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.


ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಸಭೆಯ ಹೊರಗಿರುವವರನ್ನು ತೀರ್ಪುಮಾಡುವುದಕ್ಕೆ ನನಗೇನಧಿಕಾರವಿದೆ? ಒಳಗಿನವರನ್ನು ತೀರ್ಪುಮಾಡುವವರು ನೀವೇ ಅಲ್ಲವೇ.


ಆಗ ಅವರೆಲ್ಲರೂ ಹೊರಟು ಬೇರೆ ಹಳ್ಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು