ಯೋಹಾನ 8:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೇಸು ಅವರಿಗೆ “ನನ್ನ ವಿಷಯವಾಗಿ ನಾನು ಸಾಕ್ಷಿನೀಡಿದರೂ, ನನ್ನ ಸಾಕ್ಷಿ ಸತ್ಯವಾದದ್ದು. ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆ ಎಂದು ನನಗೆ ತಿಳಿದಿದೆ, ಆದರೆ ನಾನು ಎಲ್ಲಿಂದ ಬಂದೆನೋ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ಎಂಬುದು ನಿಮಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೇಸು ಅವರಿಗೆ - ನಾನು ಎಲ್ಲಿಂದ ಬಂದವನಾಗಿಯೂ ಎಲ್ಲಿಗೆ ಹೋಗುವವನಾಗಿಯೂ ಇದ್ದೇನೆಂಬದು ನನಗೆ ಗೊತ್ತಿರುವದರಿಂದ ನನ್ನ ವಿಷಯವಾಗಿ ನಾನೇ ಸಾಕ್ಷಿಹೇಳಿಕೊಂಡರೂ ನನ್ನ ಸಾಕ್ಷಿ ನಿಜವಾಗಿರುವದು. ನೀವಾದರೋ ನಾನು ಎಲ್ಲಿಂದ ಬಂದವನು, ಎಲ್ಲಿಗೆ ಹೋಗುವವನು ಎಂಬದನ್ನು ತಿಳಿಯದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು, “ಹೌದು, ನಾನೇ ನನ್ನ ಬಗ್ಗೆ ಈ ಸಂಗತಿಗಳನ್ನು ಹೇಳುತ್ತಿದ್ದರೂ ಈ ಸಂಗತಿಗಳು ಜನರ ನಂಬಿಕೆಗೆ ಯೋಗ್ಯವಾಗಿವೆ. ಏಕೆಂದರೆ, ನಾನು ಎಲ್ಲಿಂದ ಬಂದೆನೆಂಬುದೂ ನಾನು ಎಲ್ಲಿಗೆ ಹೋಗುತ್ತೇನೆಂಬುದೂ ನನಗೆ ತಿಳಿದಿದೆ. ನಾನು ನಿಮ್ಮಂಥ ವ್ಯಕ್ತಿಯಲ್ಲ. ನಾನು ಎಲ್ಲಿಂದ ಬಂದೆನೆಂಬುದು ಮತ್ತು ಎಲ್ಲಿಗೆ ಹೋಗುತ್ತೇನೆಂಬುದು ನಿಮಗೆ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತನ್ನಾ ಜೆಜುನ್ ಜವಾಬ್ ದಿಲ್ಲ್ಯಾನ್, “ಮಿಯಾ ಮಾಜ್ಯಾಚ್ ವಿಶಯಾತ್ ಸಾಕ್ಷಿ ಸಾಂಗ್ಲ್ಯಾರ್ ತೆಕಾ ಕಿಮ್ಮತ್ ಹಾಯ್ , ಕಶ್ಯಾಕ್ ಮಟ್ಲ್ಯಾರ್ ಮಿಯಾ ಖೈತ್ನಾ ಯೆಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ಮಾಕಾ ಗೊತ್ತ್ ಹಾಯ್. ತುಮ್ಕಾ ಮಿಯಾ ಖೈತ್ನಾ ಯೆಲಾ ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ನಾ. ಅಧ್ಯಾಯವನ್ನು ನೋಡಿ |