Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೇಸು ದೇವಾಲಯದ ಕಾಣಿಕೆಯ ಪೆಟ್ಟಿಗೆಗಳು ಇರುವ ಸ್ಥಳದಲ್ಲಿ ಬೋಧನೆ ಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆದರೆ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೇಸುವು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದನು. ಜನರು ಕೊಡುವ ಕಾಣಿಕೆಯನ್ನು ಇಟ್ಟಿದ್ದ ಸ್ಥಳದ ಸಮೀಪದಲ್ಲಿ ಆತನಿದ್ದನು. ಆದರೆ ಆತನನ್ನು ಯಾರೂ ಬಂಧಿಸಲಿಲ್ಲ. ಏಕೆಂದರೆ ಆತನನ್ನು ಬಂಧಿಸತಕ್ಕ ಸಮಯ ಇನ್ನೂ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆಜು ದೆವಾಚ್ಯಾ ಗುಡಿತ್ ಹಿ ಸಗ್ಳಿ ಗೊಸ್ಟಿಯಾ ಶಿಕ್ವುತಾನಾ ಕಾನಿಕಾಚೆ ಡಬ್ಬೆ ಥವಲ್ಲ್ಯಾ ಖೊಲಿತ್ ಹೊತ್ತೊ ಖರೆ ಕೊನ್ ಬಿ ತೆಕಾ ಧರುಕ್ ನಾತ್. ಕಶ್ಯಾಕ್ ಮಟ್ಲ್ಯಾರ್ ತೆಚೊ ಎಳ್ ಅಜುನ್ ಯೆವ್ನಸಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:20
17 ತಿಳಿವುಗಳ ಹೋಲಿಕೆ  

ಇದಕ್ಕಾಗಿ ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಆತನ ಸಮಯ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನ ಮೇಲೆ ಕೈ ಹಾಕಲಿಲ್ಲ.


ನೀವು ಈ ಹಬ್ಬಕ್ಕೆ ಹೋಗಿರಿ, ನನ್ನ ಸಮಯವು ಇನ್ನೂ ಬಾರದಿರುವುದರಿಂದ ನಾನು ಈ ಹಬ್ಬಕ್ಕೆ ಈಗ ಹೋಗುವುದಿಲ್ಲ” ಎಂದು ಹೇಳಿದನು.


ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.


ಅವರಲ್ಲಿ ಕೆಲವರು ಆತನನ್ನು ಬಂಧಿಸಬೇಕೆಂದಿದ್ದರೂ ಆದರೆ ಯಾರು ಆತನ ಮೇಲೆ ಕೈ ಹಾಕಲಿಲ್ಲ.


ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.


ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.


ಅವರು ಪುನಃ ಆತನನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು, ಆದರೆ ಆತನು ಅವರ ಕೈಯಿಂದ ತಪ್ಪಿಸಿಕೊಂಡು ಹೋದನು.


ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.


ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.


ಅದೇ ಸಮಯದಲ್ಲಿ ಯೇಸು ಗುಂಪಾಗಿ ಕೂಡಿಬಂದಿದ್ದ ಜನರಿಗೆ, “ಕಳ್ಳನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನು ದೊಣ್ಣೆಗಳನ್ನು ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? ನಾನು ಪ್ರತಿದಿನ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲವಲ್ಲಾ;


ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.


ಯೇಸು ಆಕೆಗೆ “ಅಮ್ಮಾ, ಅದಕ್ಕೆ ನಾನೇನು ಮಾಡಲಿ? ನನ್ನ ಸಮಯವು ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.


ಹಬ್ಬದ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸತೊಡಗಿದನು.


ಬೆಳಗಿನಜಾವದಲ್ಲಿ ಆತನು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಆತನ ಬಳಿಗೆ ಬಂದರು. ಆತನು ಕುಳಿತುಕೊಂಡು ಅವರಿಗೆ ಬೋಧಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು