Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೇಸು ತಿರಿಗಿ ಅವರಿಗೆ - ನಾನು ಹೋಗುತ್ತೇನೆ; ನೀವು ನನ್ನನ್ನು ಹುಡುಕುವಿರಿ; ಮತ್ತು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಯೇಸು ಅವರಿಗೆ, “ನಾನು ನಿಮ್ಮನ್ನು ಬಿಟ್ಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ. ಆದರೆ ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆಜು ತೆಂಕಾ ಅನಿ ಪರ್ತುನ್, “ಮಿಯಾ ಭಾಯ್ರ್ ಪಡುನ್ ಜಾತಾ ಖರೆ ತುಮಿ ಮಾಕಾ ಹುಡಕ್ತ್ಯಾಶಿ. ಖರೆ ತುಮ್ಚ್ಯಾ ಪಾಪಾತುಚ್ ತುಮಿ ಮರ್‍ತ್ಯಾಶಿ. ಮಿಯಾ ಜಾತಾ ಥೈ ತುಮ್ಚ್ಯಾನ್ ಜಾವ್ಕ್ ಹೊಯ್ನಾ” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:21
21 ತಿಳಿವುಗಳ ಹೋಲಿಕೆ  

ನೀವು ನನ್ನನ್ನು ಹುಡುಕುವಿರಿ, ಆದರೆ ಕಂಡುಕೊಳ್ಳದೆ ಹೋಗುವಿರಿ. ನಾನು ಇರುವಲ್ಲಿಗೆ ನೀವು ಬರಲಾರಿರಿ” ಎಂದನು.


ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.


ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮ ಜೊತೆಯಲ್ಲಿ ಇರುತ್ತೇನೆ. ನೀವು ನನ್ನನ್ನು ಹುಡುಕುವಿರಿ ಆದರೆ ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.


ನೀವು ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಸತ್ತವರಾಗಿದ್ದೀರಿ.


ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.


ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು.


ಮತ್ತು ಅನೀತಿವಂತರಾದ ಇವರು ನಿತ್ಯದಂಡನೆಗೆ ಹೋಗುವರು ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು” ಎಂದು ಹೇಳಿದನು.


ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.


ಕೆಲವು ದಿನ ಮಾತ್ರ ಬದುಕತಕ್ಕ ಕೂಸಾಗಲಿ, ವೃದ್ಧನಾಗಲಿ ಅಲ್ಲಿ ಇರುವುದಿಲ್ಲ; ಯುವಕನು ನೂರು ವರ್ಷದೊಳಗೆ ಸಾಯನು, ಪಾಪಿಷ್ಠನಿಗೂ ನೂರು ವರ್ಷದೊಳಗೆ ಶಾಪ ತಗಲದು.


ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.


ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.


ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.


ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು ‘ಎಲೀಯನು ನಮ್ಮಲ್ಲಿರುವುದಿಲ್ಲ’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.


‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ ಮತ್ತು ನಾನು ಇರುವಲ್ಲಿಗೆ ನೀವು ಬರಲಾರಿರಿ’ ಎಂದು ಹೇಳಿದ ಮಾತಿನ ಅರ್ಥ ಏನಾಗಿರಬಹುದು?” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು