Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಅವರು ಆತನಿಗೆ, “ನೀನು ಯಾರು?” ಎನ್ನಲೂ, ಯೇಸು ಅವರಿಗೆ, “ಮೊದಲಿನಿಂದಲೇ ನಾನು ನಿಮಗೆ ಹೇಳಿದಂಥದ್ದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಅವರು - ನೀನು ಯಾರು? ಅಂದಾಗ ಯೇಸು - ನಾನು ನಿಮಗೆ ಹೇಳಿದಂಥದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೂದ್ಯರು, “ಹಾಗಾದರೆ, ನೀನು ಯಾರು?” ಎಂದು ಕೇಳಿದರು. ಯೇಸು, “ನಾನು ಯಾರೆಂದು ನಿಮಗೆ ಮೊದಲಿಂದ ತಿಳಿಸುತ್ತಾ ಬಂದೆನೋ, ಆತನೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ತೆಕಾ, “ಅದ್ದಿಸ್ನಾ ತುಮ್ಕಾ ಕಾಯ್ ಸಾಂಗಿತ್ ತೊ ಮಿಯಾ?” ಮನುನ್ ಇಚಾರ್‍ಲ್ಯಾನಿ. ಜೆಜುನ್ ತೆಂಕಾ, “ಮಿಯಾ ತುಮ್ಚೆಕ್ಡೆ ಕಶ್ಯಾಕ್ ಬೊಲುಚೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:25
9 ತಿಳಿವುಗಳ ಹೋಲಿಕೆ  

ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು” ಎಂದು ಹೇಳಿದನು.


“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.


ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.


ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.


ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.


ಯೆಹೂದ್ಯರು ಯೆರೂಸಲೇಮಿನಿಂದ ಯಾಜಕರನ್ನೂ, ಲೇವಿಯರನ್ನೂ ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದ್ದಕ್ಕೆ,


ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.


ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು