ಯೋಹಾನ 8:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತಸೆಮನುನ್ ಜೆಜುನ್ ತೆಂಕಾ, “ತುಮಿ ಮಾನ್ಸಾಚ್ಯಾಲೆಕಾಕ್ ವೈರ್ ಉಕಲಲ್ಲ್ಯಾ ತನ್ನಾ, ಮಿಯಾ ಕೊನ್ ಮನುನ್ ತುಮ್ಕಾ ಕಳ್ತಾ. ಖರೆ ಮಿಯಾ ಕರ್‍ತಲೆ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬಿ ಕರಿನಾ ಹೊಲಾ ಮನುನ್ ತುಮ್ಕಾ ಕಳ್ತಾ. ಮಿಯಾ ಖಾಲಿ ಮಾಜ್ಯಾ ಬಾಬಾನ್ ಮಾಕಾ ಸಾಂಗುನ್ ಧಾಡಲ್ಲ್ಯಾ ಸರ್ಕೆ ಸಾಂಗುಲಾಲಾ. ಅಧ್ಯಾಯವನ್ನು ನೋಡಿ |