Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದಕ್ಕವರು ಆತನಿಗೆ, “ನಾವು ಅಬ್ರಹಾಮನ ಸಂತಾನದವರು ಮತ್ತು ನಾವು ಎಂದೂ ಯಾರಿಗೂ ದಾಸರಾಗಿಲ್ಲ, ನಿಮಗೆ ಬಿಡುಗಡೆಯಾಗುವುದೆಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಕ್ಕವರು - ನಾವು ಅಬ್ರಹಾಮನ ಸಂತಾನದವರು; ನಾವು ಯಾರಿಗೂ ಎಂದೂ ದಾಸರಾಗಿಲ್ಲ; ನಿಮಗೆ ಬಿಡುಗಡೆಯಾಗುವದೆಂದು ನೀನು ಹೇಳುವದು ಹೇಗೆ? ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು, “ನಾವು ಅಬ್ರಹಾಮನ ಮಕ್ಕಳು. ನಾವೆಂದೂ ಯಾರ ಗುಲಾಮರೂ ಆಗಿರಲಿಲ್ಲ. ಹೀಗಿದ್ದರೂ, ನಮಗೆ ಬಿಡುಗಡೆ ಆಗುವುದೆಂದು ನೀನು ಹೇಳುವುದೇಕೆ?” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ತನ್ನಾ ತೆನಿ ಅಮಿ ಅಬ್ರಾಹಾಮಾಚ್ಯಾ ಘರಾನ್ಯಾಚೆ ಅನಿ ಅಮಿ ಕನ್ನಾಚ್ ಕೊನಾಚೆ ಗುಲಾಮ್ ಹೊವ್ಕನಾವ್. ತುಮಿ ಸ್ವತಂತ್ರ್ ಹೊತ್ಯಾಶಿ ಮನುನ್ ತಿಯಾ ಸಾಂಗಲ್ಲ್ಯಾ ಗೊಸ್ಟಿಚೊ ಅರ್ತ್ ಕಾಯ್? ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:33
18 ತಿಳಿವುಗಳ ಹೋಲಿಕೆ  

ಅಬ್ರಹಾಮನು ನಮ್ಮ ತಂದೆ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗಾಗಿ ಈ ಕಲ್ಲುಗಳಿಂದಲೂ ಮಕ್ಕಳನ್ನು ಸೃಷ್ಟಿಮಾಡಬಲ್ಲನೆಂದು ನಿಮಗೆ ಹೇಳುತ್ತೇನೆ.


ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.


ನೀವು ಅಬ್ರಹಾಮನ ಸಂತಾನದವರೆಂದು ನಾನು ಬಲ್ಲೆನು, ಆದರೂ ನನ್ನ ವಾಕ್ಯಕ್ಕೆ ನಿಮ್ಮಲ್ಲಿ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲುವುದಕ್ಕೆ ನೋಡುತ್ತಿದ್ದೀರಿ.


ಆಗ ಯೆಹೋವನು ಅಬ್ರಾಮನಿಗೆ, “ನೀನು ಚೆನ್ನಾಗಿ ತಿಳಿಯತಕ್ಕದ್ದೇನೆಂದರೆ, ನಿನ್ನ ಸಂತತಿಯವರು ಅನ್ಯದೇಶದಲ್ಲಿ ಪ್ರವಾಸಿಯಾಗಿ ವಾಸವಾಗಿದ್ದು ಆ ದೇಶದವರಿಗೆ ದಾಸರಾಗುವರು. ನಾನೂರು ವರ್ಷ ಆ ದೇಶದವರಿಂದ ಬಾಧೆಪಡುವರು.


ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ, ಯೆಹೂದದಲ್ಲಿಯೂ ಮತ್ತು ಯೆರೂಸಲೇಮಿನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.


ಆದ್ದರಿಂದ ಆತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು, ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ನಹರಾಯಿಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮ್ ಎಂಬುವವನಿಗೆ ಮಾರಿಬಿಟ್ಟನು. ಅವರು ಎಂಟು ವರ್ಷಗಳ ವರೆಗೆ ಅವನಿಗೆ ದಾಸರಾಗಿದ್ದರು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.


ಅವರು ನನಗೆ ಗುಲಾಮರಾಗಿದ್ದಾರೆ; ನಾನು ಅವರನ್ನು ಐಗುಪ್ತದೇಶದೊಳಗಿಂದ ಬರಮಾಡಿದೆನು; ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ನೀವು ನನ್ನ ಮಾತನ್ನು ಯಾಕೆ ಗ್ರಹಿಸುತ್ತಿಲ್ಲ? ಏಕೆಂದರೆ ನೀವು ನನ್ನ ವಾಕ್ಯಕ್ಕೆ ಕಿವಿಗೊಡದೆ ಇರುವುದರಿಂದಲೇ.


ಹಾಗೆಯೇ ಅಬ್ರಹಾಮನ ವಂಶದಲ್ಲಿ ಹುಟ್ಟಿದ ಮಾತ್ರಕ್ಕೆ ಅವರೆಲ್ಲರೂ ಮಕ್ಕಳೆಂದು ಎಣಿಸಲ್ಪಡುವುದಿಲ್ಲ. ಆದರೆ “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಅನ್ನಿಸಿಕೊಳ್ಳುವರು.” ಎಂದು ದೇವರು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು