ಯೋಹಾನ 8:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ನೀವು ನಿಮ್ಮ ತಂದೆಯ ಕಾರ್ಯಗಳನ್ನು ಮಾಡುತ್ತಿದ್ದೀರಿ” ಎಂದನು. ಅದಕ್ಕವರು, “ನಾವು ವ್ಯಭಿಚಾರದಿಂದ ಹುಟ್ಟಿದವರಲ್ಲ. ನಮಗೆ ಒಬ್ಬನೇ ತಂದೆ, ಆತನು ದೇವರೇ” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ನೀವು ನಿಮ್ಮ ತಂದೆಯ ಕೃತ್ಯಗಳನ್ನು ಮಾಡುತ್ತೀರಿ ಅಂದನು. ಅದಕ್ಕವರು - ನಾವು ಹಾದರಕ್ಕೆ ಹುಟ್ಟಿದವರಲ್ಲ; ನಮಗೆ ಒಬ್ಬನೇ ತಂದೆ, ಆತನು ದೇವರೇ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಆದ್ದರಿಂದ ನಿಮ್ಮ ಸ್ವಂತ ತಂದೆ ಮಾಡಿದ್ದನ್ನೇ ನೀವು ಮಾಡುತ್ತಿದ್ದೀರಿ” ಎಂದು ಹೇಳಿದನು. ಆದರೆ ಯೆಹೂದ್ಯರು, “ನಾವು ಹಾದರಕ್ಕೆ ಹುಟ್ಟಿದವರಲ್ಲ. ದೇವರೇ ನಮ್ಮ ತಂದೆ. ನಮಗಿರುವ ತಂದೆ ಆತನೊಬ್ಬನೇ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ತುಮಿ ತುಮ್ಚ್ಯಾ ಬಾಬಾನ್ ಕರಲ್ಲ್ಯಾ ಸರ್ಕೆಚ್ ಕರುಕ್ ಲಾಗ್ಲ್ಯಾಶಿ” ಮಟ್ಲ್ಯಾನ್. ತನ್ನಾ ತೆನಿ ಸಾಂಗಲ್ಲ್ಯಾನ್ ಅಮಿ ವೆಭಿಚಾರಾಕ್ ಜಲ್ಮುಕ್ನಾಂವ್ , “ದೆವ್ ಎಕ್ಲೊಚ್ ಅಮ್ಚೊ ಬಾಬಾ ಹೊವ್ನ್ ಹಾಯ್ ಅನಿ ಅಮಿ ತೆಚಿ ಖರಿ ಪೊರಾ” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.