ಯೋಹಾನ 8:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಯೇಸು ಅವರಿಗೆ, “ದೇವರು ನಿಮಗೆ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ, ಏಕೆಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ, ಆದರೆ ದೇವರೇ ನನ್ನನ್ನು ಕಳುಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಯೇಸು ಅವರಿಗೆ - ದೇವರು ನಿಮ್ಮ ತಂದೆಯಾಗಿದ್ದರೆ, ನನ್ನನ್ನು ಪ್ರೀತಿಸುತ್ತಿದ್ದಿರಿ; ಯಾಕಂದರೆ ನಾನು ದೇವರಿಂದಲೇ ಹೊರಟು ಲೋಕಕ್ಕೆ ಬಂದವನಾಗಿದ್ದೇನೆ. ನನ್ನಷ್ಟಕ್ಕೆ ನಾನೇ ಬರಲಿಲ್ಲ; ಆತನೇ ನನ್ನನ್ನು ಕಳುಹಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೇಸು ಆ ಯೆಹೂದ್ಯರಿಗೆ, “ದೇವರು ನಿಜವಾಗಿಯೂ ನಿಮ್ಮ ತಂದೆಯಾಗಿದ್ದರೆ, ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ನಾನು ದೇವರಿಂದ ಬಂದು ಈಗ ಇಲ್ಲಿದ್ದೇನೆ. ನಾನು ಬಂದದ್ದು ನನ್ನ ಸ್ವಂತ ಅಧಿಕಾರದಿಂದಲ್ಲ. ದೇವರೇ ನನ್ನನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಜೆಜುನ್ ತೆಂಕಾ, “ಖರೆಚ್! ದೆವ್ ತುಮ್ಚೊ ಬಾಬಾ ಹೊಲ್ಯಾರ್ ತುಮಿ ಮಾಜೊ ಪ್ರೆಮ್ ಕರಿ ಹೊತ್ತ್ಯಾಶಿ, ಕಶ್ಯಾಕ್ ಮಟ್ಲ್ಯಾರ್ ಮಿಯಾ ದೆವಾತ್ನಾಚ್ ಯೆಲಾ ಅನಿ ಅತ್ತಾ ಹಿತ್ತೆ ಹಾಂವ್. ಮಿಯಾ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಯೆವ್ಕ್ ನಾ, ತೆನಿಚ್ ಮಾಕಾ ಧಾಡುನ್ ದಿಲ್ಯಾನಾಯ್. ಅಧ್ಯಾಯವನ್ನು ನೋಡಿ |
“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.