ಯೋಹಾನ 8:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್54 ತನ್ನಾ ಜೆಜುನ್, “ಮಿಯಾ ಮಾಕಾಚ್ ಮರ್‍ಯಾದ್ ಗಾವುಚಿ ಮನುನ್ ಬಗುಲಾ ಹೊಲ್ಯಾರ್, ತ್ಯಾ ಮರ್‍ಯಾದಿಕ್ ಕಾಯ್ಬಿ ಕಿಮ್ಮತ್ ನಾ. ಮಾಜೊ ಬಾಬಾಚ್ ಮಾಕಾ ಮರ್‍ಯಾದ್ ಗಾವಿ ಸರ್ಕೆ ಕರ್‍ತಾ ತೆಕಾ ತುಮಿ ತುಮ್ಚೊ ದೆವ್ ಮನುನ್ ಮನ್ತ್ಯಾಶಿ. ಅಧ್ಯಾಯವನ್ನು ನೋಡಿ |
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.