Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 8:55 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

55 ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ. ನಾನಂತೂ ಆತನನ್ನು ಬಲ್ಲೆನು, ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು. ಆದರೆ ನಾನು ಆತನನ್ನು ತಿಳಿದಿದ್ದೇನೆ. ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

55 ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

55 ನಾನಂತು ಆತನನ್ನು ಬಲ್ಲೆನು; ಆತನನ್ನು ಅರಿಯೆನೆಂದು ಹೇಳಿದರೆ ನಿಮ್ಮ ಹಾಗೆ ಸುಳ್ಳುಗಾರನಾಗುವೆನು; ಆದರೆ ಆತನನ್ನು ತಿಳಿದಿದ್ದೇನೆ, ಆತನ ವಾಕ್ಯವನ್ನು ಕೈಕೊಂಡು ನಡೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

55 ಆದರೆ ನೀವು ಆತನನ್ನು ನಿಜವಾಗಿಯೂ ತಿಳಿದಿಲ್ಲ. ನಾನು ಆತನನ್ನು ಬಲ್ಲೆನು. ನಾನು ಆತನನ್ನು ತಿಳಿದಿಲ್ಲವೆಂದು ಹೇಳಿದರೆ ನಿಮ್ಮಂತೆ ನಾನು ಸಹ ಸುಳ್ಳುಗಾರನಾಗುತ್ತೇನೆ. ನಾನು ಆತನನ್ನು ಬಲ್ಲೆನು. ನಾನು ಆತನ ವಾಕ್ಯಕ್ಕೆ ವಿಧೇಯನಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

55 ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

55 ತುಮಿ ತೆಕಾ ಕನ್ನಾಬಿ ವಳ್ಕಿನ್ಯಾಶಿ ಖರೆ ಮಿಯಾ ತೆಕಾ ವಳಕ್ತಾ, ಅನಿ ಮಿಯಾ ತೆಕಾ ವಳ್ಕಿನಾ ಮನುನ್ ಸಾಂಗಟ್ಲ್ಯಾರ್ ಮಿಯಾಬಿ ತುಮ್ಚ್ಯಾ ಸರ್ಕೊಚ್ ಝುಟೊ ಹೊತಾ. ಖರೆ ಮಿಯಾ ತೆಕಾ ವಳಕ್ತಾ ಅನಿ ತೆಚ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಚಲ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 8:55
25 ತಿಳಿವುಗಳ ಹೋಲಿಕೆ  

ಅವರು, “ನಿನ್ನ ತಂದೆ ಎಲ್ಲಿದ್ದಾನೆ?” ಎಂದರು. ಅದಕ್ಕೆ ಯೇಸು, “ನೀವು ನನ್ನನ್ನೂ ತಿಳಿದಿಲ್ಲ ಹಾಗೂ ನನ್ನ ತಂದೆಯನ್ನೂ ತಿಳಿದಿಲ್ಲ. ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ಸಹ ತಿಳಿದಿರುವಿರಿ” ಎಂದು ಉತ್ತರ ಕೊಟ್ಟನು.


ಸೈತಾನನು ನಿಮ್ಮ ತಂದೆ, ನೀವು ಆತನಿಗೆ ಸೇರಿದವರಾಗಿದ್ದು ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ತನ್ನ ಸ್ವಭಾವಕ್ಕನುಸಾರವಾಗಿ ಸುಳ್ಳಾಡುತ್ತಾನೆ, ಏಕೆಂದರೆ ಅವನು ಸುಳ್ಳುಗಾರನೂ ಮತ್ತು ಸುಳ್ಳಿನ ತಂದೆಯೂ ಆಗಿದ್ದಾನೆ.


ತಾವು ಯೆಹೂದ್ಯರೆಂದು ಸುಳ್ಳಾಗಿ ಕೊಚ್ಚಿಕೊಳ್ಳುವ ಕೆಲವರನ್ನು ಸೈತಾನನ ಸಭಾಮಂದಿರದಿಂದ ಕರೆಯಿಸುವೆನು. ಅವರು ನಿನ್ನ ಪಾದಕ್ಕೆ ಬಿದ್ದು ನಮಸ್ಕರಿಸುವಂತೆಯೂ, ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುವೆನು.


ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.


ನನ್ನ ತಂದೆಯು ಎಲ್ಲವನ್ನು ನನಗೆ ಒಪ್ಪಿಸಿದ್ದಾನೆ. ತಂದೆಯ ಹೊರತು ಇನ್ನಾವನೂ ಮಗನನ್ನು ತಿಳಿದವನಲ್ಲ. ಮಗನ ಹೊರತು ಇನ್ನಾವನೂ ತಂದೆಯನ್ನು ತಿಳಿದವನಲ್ಲ. ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಇಚ್ಛಿಸುತ್ತಾನೋ ಅವನು ಆತನನ್ನು ತಿಳಿದವನಾಗಿದ್ದಾನೆ.


ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ. ಹೇಗೆಂದರೆ ದೇವರು ತನ್ನ ಮಗನ ಪರವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.


ಆದರೆ ಅವರು ನನ್ನನ್ನು ಕಳುಹಿಸಿಕೊಟ್ಟಾತನನ್ನು ತಿಳಿಯದವರಾದ್ದರಿಂದ ಇದನ್ನೆಲ್ಲಾ ನನ್ನ ಹೆಸರಿನ ನಿಮಿತ್ತ ನಿಮಗೆ ಮಾಡುವರು.


ಸುಳ್ಳುಗಾರನು ಯಾರು? ಯೇಸುವನ್ನು ಕ್ರಿಸ್ತನಲ್ಲ ಎಂದು ಅಲ್ಲಗಳೆಯುವವನು ಸುಳ್ಳುಗಾರನಾಗಿದ್ದಾಯೇ ಹೊರತು ಮತ್ತಾರು ಆಗಿರಲು ಸಾಧ್ಯ? ತಂದೆಯನ್ನೂ ಮಗನನ್ನೂ ಅಲ್ಲಗಳೆಯುವವನು ಕ್ರಿಸ್ತವಿರೋಧಿಯಾಗಿದ್ದಾನೆ.


ಒಬ್ಬನು, “ನಾನು ಆತನನ್ನು ಬಲ್ಲೆನು” ಎಂದು ಹೇಳಿ ಆತನ ಆಜ್ಞೆಗಳಂತೆ ನಡೆಯದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವೆಂಬುದು ಅವನಲ್ಲಿ ಇಲ್ಲ.


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.


ನೀತಿಸ್ವರೂಪನಾದ ತಂದೆಯೇ, ಲೋಕವು ನಿನ್ನನ್ನು ತಿಳಿಯಲಿಲ್ಲ, ಆದರೆ ನಾನು ನಿನ್ನನ್ನು ತಿಳಿದಿದ್ದೇನೆ ಮತ್ತು ಇವರು ನೀನೇ ನನ್ನನ್ನು ಕಳುಹಿಸಿದ್ದೀ ಎಂದು ತಿಳಿದಿದ್ದಾರೆ.


ಅವರು ತಂದೆಯನ್ನಾದರೂ ನನ್ನನ್ನಾದರೂ ತಿಳಿಯದವರಾಗಿರುವುದರಿಂದ ಇವೆಲ್ಲವುಗಳನ್ನು ನಿಮಗೆ ಮಾಡುವರು.


ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಗೊಂಡು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಪ್ರಕಾರ, ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ, ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ತಂದೆಯು ನನ್ನನ್ನು ತಿಳಿದಿರುವಂತೆಯೇ, ನಾನು ತಂದೆಯನ್ನು ತಿಳಿದಿದ್ದೇನೆ; ಮತ್ತು ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.


ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.


ದೇವರಿಂದ ಬಂದವನೊಬ್ಬನೇ ತಂದೆಯನ್ನು ನೋಡಿದ್ದಾನೆಯೇ ಹೊರತು ಮತ್ಯಾರು ತಂದೆಯನ್ನು ನೋಡಿಲ್ಲ; ಆತನೊಬ್ಬನೇ ತಂದೆಯನ್ನು ನೋಡಿದವನು.


ದೇವರನ್ನು ಯಾರೂ ಎಂದೂ ನೋಡಿಲ್ಲ. ತಂದೆಯ ಹೃದಯದಲ್ಲಿರುವ ಏಕಪುತ್ರನೂ ಸ್ವತಃ ದೇವರೂ ಆಗಿರುವಾತನೇ, ತಂದೆಯನ್ನು ತಿಳಿಯಪಡಿಸಿದ್ದಾನೆ.


ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.


ಅವರು ತಮ್ಮ ದೇವರ ಕಡೆಗೆ ತಿರುಗಿಕೊಳ್ಳಲು ಅವುಗಳ ದುಷ್ಕೃತ್ಯಗಳು ಅವರನ್ನು ಬಿಡುವುದಿಲ್ಲ; ವ್ಯಭಿಚಾರದ ಸ್ವಭಾವವು ಅವುಗಳಲ್ಲಿ ನೆಲೆಗೊಂಡಿದೆ, ಯೆಹೋವನನ್ನು ತಿಳಿದುಕೊಂಡಿಲ್ಲ.


ಸುಳ್ಳಾಡುವುದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ. ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ನುಡಿಯುತ್ತಾನೆ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?


ನಾವು ದೇವರೊಂದಿಗೆ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿಕೊಳ್ಳುತ್ತಾ ಕತ್ತಲೆಯಲ್ಲಿ ನಡೆದರೆ ಸುಳ್ಳಾಡುವವರಾಗಿದ್ದೇವೆ, ಸತ್ಯವನ್ನನುಸರಿಸುತ್ತಿಲ್ಲ ಎಂದು ತಿಳಿದು ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು