Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಹಾದುಹೋಗುತ್ತಿರುವಾಗ ಒಬ್ಬ ಹುಟ್ಟುಕುರುಡನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ನಡೆದುಕೊಂಡು ಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಅಪ್ಲಿ ವಾಟ್ ಧರುನ್ ಜಾತಾನಾ ಉಪಾಜ್ತಾನಾಚ್ ಕುಡ್ಡೊ ಹೊತ್ತ್ಯಾ ಎಕ್ ಮಾನ್ಸಾಕ್ ತೆನಿ ಬಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:1
12 ತಿಳಿವುಗಳ ಹೋಲಿಕೆ  

ಆಗ ಅವರು ಆತನ ಮೇಲೆ ಎಸೆಯಲು, ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಮರೆಯಾಗಿ ದೇವಾಲಯದೊಳಗಿನಿಂದ ಹೊರಗೆ ಹೊರಟು ಹೋದನು.


ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.


ಆಗ ಕುರುಡರ ಕಣ್ಣು ಕಾಣುವುದು, ಕಿವುಡರ ಕಿವಿ ಕೇಳುವುದು.


ಯೇಸು ಅಲ್ಲಿಂದ ಹಾದುಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಕೂಗುತ್ತಾ ಆತನನ್ನು ಹಿಂಬಾಲಿಸಿದರು.


ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.


ಯೇಸು ಅವನ ತಂದೆಯನ್ನು, “ಇವನಿಗೆ ಹೀಗಾಗಿ ಎಷ್ಟು ಕಾಲವಾಯಿತು?” ಎಂದು ಕೇಳಿದಾಗ ಅವನು, “ಚಿಕ್ಕಂದಿನಲ್ಲಿಯೇ ಬಂದಿದೆ;


ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.


ಅಲ್ಲಿ ಮೂವತ್ತೆಂಟು ವರ್ಷಗಳಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು.


ಈ ಸೂಚಕಕಾರ್ಯದಿಂದ ಸ್ವಸ್ಥತೆ ಹೊಂದಿದ ಆ ಮನುಷ್ಯನಿಗೆ ನಲವತ್ತು ವರ್ಷಕ್ಕಿಂತ ಹೆಚ್ಚು ವಯಸ್ಸಾಗಿತ್ತು.


ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು.


ಲುಸ್ತ್ರ ಪಟ್ಟಣದಲ್ಲಿ ಕಾಲುಗಳಲ್ಲಿ ಬಲವಿಲ್ಲದ ಒಬ್ಬ ಮನುಷ್ಯನು ಕುಳಿತಿದ್ದನು. ಅವನು ಹುಟ್ಟುಕುಂಟನಾಗಿದ್ದು, ಅದುವರೆಗೂ ನಡೆಯಲಾರದೆ ಇದ್ದವನು.


ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು