ಯೋಹಾನ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆದಕಾರಣ ಈ ಫರಿಸಾಯರು ಸಹ ಅವನನ್ನು ವಿಚಾರಿಸಿ - ನಿನಗೆ ಹೇಗೆ ಕಣ್ಣು ಬಂದವು ಎಂದು ಕೇಳಿದರು. ಅವನು ಅವರಿಗೆ - ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳಕೊಂಡೆನು, ಕಣ್ಣು ಕಾಣುತ್ತವೆ ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಫಾರಿಜೆವಾನಿ ಅನಿ ಎಗ್ದಾ ಇಚಾರ್‍ಲ್ಯಾನಿ. ತ್ಯಾ ಬರೊ ಹೊಲ್ಲ್ಯಾ ಮಾನ್ಸಾಕ್, "ತುಕಾ ತುಜಿ ದಿಸ್ಟ್ ಕಶೆ ಕರುನ್ ಗಾವ್ಲಿ." ಮನುನ್ ಇಚಾರ್‍ಲ್ಯಾನಿ. ತೆನಿ ತೆಂಕಾ" ತೆನಿ ಮಾಜ್ಯಾ ಡೊಳ್ಯಾಕ್ನಿ ಚಿಕ್ಕೊಲ್ ಲಾವ್ಲ್ಯಾನ್ ಮಾನಾ ಮಿಯಾ ಮಾಜೆ ತೊಂಡ್ ಧುವ್ನ್ ಘೆಟ್ಲೊ ಅತ್ತಾ ಮಾಕಾ ದಿಸ್ಟ್ ದಿಸುಲಾಲಾ." ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |