ಯೋಹಾನ 9:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತನ್ನಾ ಉಲ್ಲಿ ಫಾರಿಜೆವಾನಿ " ಹೆ ಕರಲ್ಲೊ ಮಾನುಸ್ ದೆವಾಕ್ ನಾ ಯೆಲ್ಲೊ ನ್ಹಯ್," ತೊ ಸಬ್ಬಾತಾಚೊ ಖಾಯ್ದೊಚ್ ಪಾಳಿನಾ, ಮಟ್ಲ್ಯಾನಿ. ಖರೆ ಅನಿ ಉಲ್ಲ್ಯಾನಿ " ಎಕ್ ಪಾಪಿ ಮಾನ್ಸಾನ್ ಎವ್ಡೆ ಮೊಟೆ ಅಜಾಪ್ ಕಶೆ ಕರುಕ್ ಹೊತಾ?" ಮಟ್ಲ್ಯಾನಿ, ಅಶೆ ತೆಂಚ್ಯಾ- ತೆಂಚ್ಯಾ ಮದ್ದಿಚ್ ವಾದ್‍ವಿವಾದ್ ಹೊಲ್ಲೆ. ಅಧ್ಯಾಯವನ್ನು ನೋಡಿ |