Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೇಸು, “ಇವನಾಗಲಿ ಇವನ ತಂದೆತಾಯಿಗಳಾಗಲಿ ಪಾಪ ಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವುದಕ್ಕಾಗಿ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೇಸು - ಇವನೂ ಪಾಪಮಾಡಲಿಲ್ಲ, ಇವನ ತಂದೆತಾಯಿಗಳೂ ಪಾಪಮಾಡಲಿಲ್ಲ; ದೇವರ ಕ್ರಿಯೆಗಳು ಇವನಲ್ಲಿ ತೋರಿಬರುವದಕ್ಕೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೇಸು, “ಅವನ ಪಾಪವಾಗಲಿ ಅವನ ತಂದೆತಾಯಿಗಳ ಪಾಪವಾಗಲಿ ಇದಕ್ಕೆ ಕಾರಣವಲ್ಲ. ದೇವರ ಕಾರ್ಯವು ಅವನಲ್ಲಿ ತೋರಿಬಲೆಂದು ಹೀಗಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಜೆಜುನ್, “ತೊ ತೆಚ್ಯಾ ಪಾಪಾಕ್ನಿ ಲಾಗುನ್ ಹೊಂವ್ದಿ, ತೆಚ್ಯಾ ಬಾಯ್ - ಬಾಬಾಚ್ಯಾ ಪಾಪಾಕ್ನಿ ಹೊಂವ್ದಿ ಕುಡ್ಡೊ ಹೊವ್ನ್ ಉಪ್ಜುಕ್ನಾ, ದೆವಾಚೊ ಬಳ್ ಕಾಮಾಚ್ಯಾ ರುಪಾತ್ ದಾಕ್ವುನ್ ದಿವ್‍ಸಾಟ್ನಿ ಮನುನ್ ತೊ ಕುಡ್ಡೊ ಹೊವ್ನ್ ಉಪಜ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:3
16 ತಿಳಿವುಗಳ ಹೋಲಿಕೆ  

ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.


ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು


ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.


ಯೆಹೋವನು ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನನ್ನು ಕುರಿತು, “ನಿನ್ನ ಮೇಲೆಯೂ, ನಿನ್ನ ಇಬ್ಬರು ಸ್ನೇಹಿತರ ಮೇಲೆಯೂ ಕೋಪಗೊಂಡಿದ್ದೇನೆ; ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಯಥಾರ್ಥವನ್ನಾಡಿದಂತೆ ನೀನು ಆಡಲಿಲ್ಲ.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ಆ ಸರ್ಪವು ಅವನ ಕೈಯಿಂದ ಜೋತಾಡುವುದನ್ನು ದ್ವೀಪದವರು ನೋಡಿ; “ಈ ಮನುಷ್ಯನು ಕೊಲೆಪಾತಕನೇ ಸರಿ; ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯದೇವತೆಯು ಇವನನ್ನು ಬದುಕಗೊಡಿಸುವುದಿಲ್ಲವೆಂದು” ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ಆಹಾ, ನಿಮ್ಮ ಯೋಚನೆಗಳನ್ನು ಬಲ್ಲೆ, ನೀವು ನನ್ನ ವಿರುದ್ಧವಾಗಿ ಮಾಡುವ ಕುಯುಕ್ತಿಗಳನ್ನು ತಿಳಿದುಕೊಂಡಿದ್ದೇನೆ.


ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.


ನಾವು ಆತನ ಮೂಲಕ ಜೀವಿಸುವುದಕ್ಕಾಗಿ ದೇವರು ತನ್ನ ಒಬ್ಬನೇ ಮಗನನ್ನು ಲೋಕಕ್ಕೆ ಕಳುಹಿಸಿಕೊಟ್ಟದ್ದರಲ್ಲಿಯೇ ದೇವರ ಪ್ರೀತಿಯು ನಮ್ಮಲ್ಲಿ ಪ್ರತ್ಯಕ್ಷವಾಗಿದೆ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು