Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಪಾಪಿ ಲೊಕಾಂಚೆ ದೆವ್ ಆಯ್ಕಿನಾ, ಮನುನ್ ಅಮ್ಕಾ ಗೊತ್ತ್ ಹಾಯ್, ಜೆ ಕೊನ್ ತೆಕಾ ಮಾನ್ ದಿತಾ ತೆಂಚೆ ದೆವ್ ಆಯಿಕ್ತಾ, ಅನಿ ತೆಂಕಾ ಪಾಜೆ ಹೊಲ್ಲೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:31
41 ತಿಳಿವುಗಳ ಹೋಲಿಕೆ  

ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ಇಷ್ಟೆಲ್ಲಾ ನಡೆಸಿ ಇವರು ಯೆಹೋವನಿಗೆ ಮೊರೆಯಿಡಲು ಆತನು ಇವರಿಗೆ ಉತ್ತರಕೊಡನು. ಇವರ ನಡತೆಯ ದುಷ್ಕೃತ್ಯಗಳಿಗೆ ತಕ್ಕ ಹಾಗೆ ಆ ಕಾಲದಲ್ಲಿ ಇವರಿಗೆ ವಿಮುಖನಾಗುವೆನು.”


ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು.


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.


ಆದಕಾರಣ ನಾನು ಕೋಪೋದ್ರೇಕದಿಂದ ವರ್ತಿಸುವೆನು, ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ; ಅವರು ಕೂಗಿಕೊಳ್ಳುವ ಮಹಾ ಶಬ್ದವು ನನ್ನ ಕಿವಿಗೆ ಬಿದ್ದರೂ ಆಲಿಸುವುದಿಲ್ಲ.”


ಯೇಸು ಅವರಿಗೆ “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ಮಾಡಿ ಆತನ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.


ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.


ಈಗ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಹೋಗಿ ನಿಮ್ಮ ದೋಷಪರಿಹಾರಕ್ಕಾಗಿ ಹೋಮಮಾಡಿರಿ. ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು. ನಾನು ಅವನ ವಿಜ್ಞಾಪನೆಯನ್ನು ಲಾಲಿಸಿ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ನಿಮಗೆ ವಿಧಿಸುವುದಿಲ್ಲ. ನನ್ನ ದಾಸನಾದ ಯೋಬನು ನನ್ನ ವಿಷಯವಾಗಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ” ಎಂದು ಹೇಳಿದನು.


ಇಂಥಾ ಸಂದರ್ಭದಲ್ಲಿ ಅವರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುವರು, ಆದರೂ ಆತನು ಉತ್ತರವನ್ನು ದಯಪಾಲಿಸುವುದಿಲ್ಲ.


ಯಾರಿಗಾದರೂ ಆತನ ಚಿತ್ತದಂತೆ ನಡೆಯುವುದಕ್ಕೆ ಮನಸ್ಸಿದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದ್ದದ್ದೋ ಅಥವಾ ನಾನೇ ಮಾತನಾಡುತ್ತೇನೋ ಎಂಬುದು ಗೊತ್ತಾಗುವುದು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು,


ನಿನ್ನ ಚಿತ್ತದಂತೆ ನಡೆಯಲು ನನಗೆ ಕಲಿಸು, ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಸಮದಾರಿಯಲ್ಲಿ ನಡೆಸಲಿ.


ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.


ದೇವರು ಆ ಪ್ರದೇಶದ ಪಟ್ಟಣಗಳನ್ನು ನಾಶಮಾಡಿದಾಗ, ಅಬ್ರಹಾಮನನ್ನು ನೆನಪುಮಾಡಿಕೊಂಡನು. ಲೋಟನು ವಾಸವಾಗಿದ್ದ ಪಟ್ಟಣಗಳನ್ನು ಹಾಳುಮಾಡಿ ಆ ಸ್ಥಳದೊಳಗಿಂದ ಲೋಟನನ್ನು ಹೊರಗೆ ಕಳುಹಿಸಿ ಪಾರುಮಾಡಿದನು.


ಆದುದರಿಂದ ಆತನು ಅವರನ್ನು ಸಂಹರಿಸುವೆನು ಎನ್ನಲು, ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ, ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಆತನ ಯಾಜಕರಲ್ಲಿ ಮೋಶೆ ಮತ್ತು ಆರೋನರೂ, ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿದಾಗೆಲ್ಲ, ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ನನ್ನ ದೇವರೇ, ನಿನ್ನ ಚಿತ್ತವನ್ನು ಅನುಸರಿಸುವುದೇ ನನ್ನ ಸಂತೋಷವು; ನಿನ್ನ ಧರ್ಮೋಪದೇಶವು ನನ್ನ ಅಂತರಂಗದಲ್ಲಿದೆ” ಅಂದೆನು.


ಆಗ ನಾನು, ಇಗೋ, ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವ ಪ್ರಕಾರ ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದೆನು.


ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ ಮತ್ತು ರಕ್ಷಿಸಲೂ ಇಲ್ಲ.


ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.


ಅದಕ್ಕೆ ಆ ಮನುಷ್ಯನು, “ಆತನು ನನ್ನ ಕಣ್ಣುಗಳನ್ನು ತೆರೆದರೂ ಆತನು ಎಲ್ಲಿಯವನೆಂದು ನಿಮಗೆ ತಿಳಿಯದೆ ಇರುವುದು ಆಶ್ಚರ್ಯವಲ್ಲವೇ!


ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾವನಾದರೂ ತೆರೆದಿದ್ದನ್ನು ಲೋಕಾದಿಯಿಂದ ಒಬ್ಬನಾದರೂ ಕೇಳಲಿಲ್ಲ.


ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು