Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 9:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆಂಕಾ ಜೆಜುನ್ “ತುಮಿ ಕುಡ್ಡೆ ಮನುನ್ ರ್‍ಹಾಲ್ಯಾರ್, ತುಮಿ ಚುಕಿದಾರ್ ಹೊಯ್‍ನ್ಯಾಶಿ, ಖರೆ ಅನಿಬಿ ತುಮಿ ತುಮ್ಚಿ ನದರ್ ಬರಿಚ್ ಮನುನ್ ಮನ್ತ್ಯಾಶಿ ತರ್, ತುಮಿ ಚುಕ್ ಚಿಂತುನ್ ಹಾಸಿ” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 9:41
9 ತಿಳಿವುಗಳ ಹೋಲಿಕೆ  

ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.


ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು” ಅಂದನು.


ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು, ಅಂಥವನಿಗಿಂತಲೂ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯನ್ನಿಡಬಹುದು.


ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.


ತನ್ನ ಯಜಮಾನನ ಇಷ್ಟಾರ್ಥವನ್ನು ಆಳು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಅವನ ಚಿತ್ತಕ್ಕನುಸಾರ ನಡೆಯದಿದ್ದರೆ ಕಠಿಣವಾದ ಶಿಕ್ಷೆಗೆ ಗುರಿಯಾಗುವನು.


ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ಗೊತ್ತಿದರೂ ಅದನ್ನು ಮಾಡದೆ ಇರುವವನು ಪಾಪ ಮಾಡುವವನಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು