Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಅವರು ಬಹಳವಾಗಿ ದುಃಖಿಸಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟು ತನ್ನ ತವರಿಗೆ ಹೋದಳು; ರೂತಳಾದರೋ ಅತ್ತೆಯನ್ನು ತೊರೆದುಹೋಗದೆ ಅವಳೊಂದಿಗೆ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ಅವರು ತಿರಿಗಿ ಗಟ್ಟಿಯಾಗಿ ಅತ್ತರು. ಒರ್ಫಳು ಅತ್ತೆಯನ್ನು ಮುದ್ದಿಟ್ಟು ಹೊರಟುಹೋದಳು; ರೂತಳಾದರೋ ಅತ್ತೆಯನ್ನೇ ಅಂಟಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವರೆಲ್ಲರೂ ಮತ್ತೊಮ್ಮೆ ಗಟ್ಟಿಯಾಗಿ ಅತ್ತರು. ಒರ್ಫಾಳು ನೊವೊಮಿಗೆ ಮುದ್ದಿಟ್ಟು ಹೊರಟುಹೋದಳು. ಆದರೆ ರೂತಳು ಅವಳನ್ನು ಮುದ್ದಿಟ್ಟು ಆಕೆಯೊಂದಿಗೆ ಉಳಿದುಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:14
22 ತಿಳಿವುಗಳ ಹೋಲಿಕೆ  

ಬಹಳ ಗೆಳೆಯರನ್ನು ಸೇರಿಸಿಕೊಂಡವನಿಗೆ ನಾಶನ, ಸಹೋದರನಿಗಿಂತಲೂ ಹತ್ತಿರ ಹೊಂದಿಕೊಳ್ಳುವ ಮಿತ್ರನುಂಟು.


ಅನಂತರ ಯೇಸು ತನ್ನ ಶಿಷ್ಯರಿಗೆ ಹೇಳಿದ್ದೇನೆಂದರೆ “ಯಾವನಾದರೂ ನನ್ನನ್ನು ಹಿಂಬಾಲಿಸುವುದಕ್ಕೆ ಬಯಸಿದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.


ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.


ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.


ಆದರೆ ಆ ಯೌವನಸ್ಥನು ಬಹಳ ಆಸ್ತಿಯುಳ್ಳವನಾಗಿದ್ದುದರಿಂದ ಈ ಮಾತನ್ನು ಕೇಳಿ ದುಃಖದಿಂದ ಹೊರಟುಹೋದನು.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ಮಿತ್ರನ ಪ್ರೀತಿಯು ನಿರಂತರ, ಸಹೋದರನ ಜನ್ಮವು ಆಪತ್ತಿನಲ್ಲಿ ಸಾರ್ಥಕ.


ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.


ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.


ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು.


ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.


ಮುಂಜಾನೆ ಲಾಬಾನನು ಎದ್ದು ತನ್ನ ಹೆಣ್ಣು ಮಕ್ಕಳಿಗೂ, ಮೊಮ್ಮಕ್ಕಳಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿ ತನ್ನ ಮನೆಗೆ ಹಿಂತಿರುಗಿ ಹೋದನು.


ಆದರೆ ನೀನು ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ, ಮುದ್ದಿಡುವುದಕ್ಕಾದರೂ ಆಗದಂತೆ ಮಾಡಿದಿ. ನೀನು ಮಾಡಿದ್ದು ಹುಚ್ಚು ಕೆಲಸ.


ನಿಮ್ಮ ದೇವರಾದ ಯೆಹೋವನನ್ನು ನೀವು ನಂಬಿ ನಡೆದುದರಿಂದ ನೀವಾದರೋ ಇಂದಿನವರೆಗೂ ಉಳಿದಿದ್ದೀರಿ.


ಅವರು ದೊಡ್ಡವರಾಗುವ ತನಕ ನೀವು ಕಾದಿರುವಿರೋ? ಅಲ್ಲಿಯ ವರೆಗೂ ಗಂಡಂದಿರಿಲ್ಲದೆ ಇರುವಿರೋ? ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ; ಯೆಹೋವನ ಹಸ್ತವು ನನ್ನಿಂದ ದೂರವಾಗಿರುವುದರಿಂದ ನಾನು ನಿಮಗಿಂತ ಹೆಚ್ಚಾಗಿ ದುಃಖಪಡುತ್ತೇನೆ” ಅಂದಳು.


ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,


ಎಲ್ಲಾ ಜನರೂ ನದಿದಾಟಿದರು. ಅರಸನು ನದಿ ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಹೋದನು.


ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ


ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು