Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನ್ನನ್ನು ಹೆಚ್ಚಾಗಿ ಶಿಕ್ಷಿಸಲಿ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲೇ ನನಗೆ ಸಮಾಧಿಯಾಗಬೇಕು. ಮರಣದಿಂದಲ್ಲದೆ ನಾನು ನಿನ್ನನ್ನು ಅಗಲಿದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀನು ಸಾಯುವಲ್ಲೇ ನಾನೂ ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಬೇಕು. ಈ ಪ್ರತಿಜ್ಞೆಯನ್ನು ನಾನು ಪೂರ್ಣಗೊಳಿಸದಿದ್ದರೆ ನನ್ನನ್ನು ಶಿಕ್ಷಿಸು ಎಂದು ನಾನು ಯೆಹೋವನಲ್ಲಿ ಕೇಳಿಕೊಳ್ಳುತ್ತೇನೆ. ಮರಣವು ಮಾತ್ರ ನಮ್ಮಿಬ್ಬರನ್ನು ಅಗಲಿಸಬಲ್ಲದು” ಎಂದು ದೃಢವಾಗಿ ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:17
18 ತಿಳಿವುಗಳ ಹೋಲಿಕೆ  

ಆಗ ಏಲಿಯು ಅವನಿಗೆ, “ಯೆಹೋವನು ನಿನಗೆ ತಿಳಿಸಿದ್ದೇನು? ಆತನ ಮಾತುಗಳಲ್ಲಿ ಒಂದನ್ನಾದರೂ ಮುಚ್ಚಿಡಬೇಡ; ಮುಚ್ಚಿಟ್ಟರೆ ಆತನು ಬೇಕಾದ ಹಾಗೆ ನಿನ್ನನ್ನು ದಂಡಿಸಲಿ” ಎಂದು ಹೇಳಲು


ಇದಲ್ಲದೆ ಅವನು, “ನಾನು ಈ ಹೊತ್ತು ಶಾಫಾಟನ ಮಗನಾದ ಎಲೀಷನ ತಲೆಯನ್ನು ಅವನ ದೇಹದಿಂದ ಬೇರ್ಪಡಿಸದೆ ಹೋದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟುಕೊಂಡನು.


ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.


ಅಮಾಸನಿಗೆ, ‘ನೀನು ನನಗೆ ರಕ್ತಸಂಬಂಧಿಯಾಗಿದ್ದೀ. ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯ ಸೇನಾಧಿಪತಿಯನ್ನಾಗಿ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ’ ಎಂಬುದಾಗಿಯೂ ತಿಳಿಸಿರಿ” ಎಂದು ಹೇಳಿ ಕಳುಹಿಸಿದನು.


ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು.


ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.


ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.


ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.


ನಾನು ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದ ವರೆಗಿರುವ ಎಲ್ಲಾ ಇಸ್ರಾಯೇಲರಲ್ಲಿಯೂ, ಯೆಹೂದ್ಯರಲ್ಲಿಯೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸಿ,


ಆದರೆ ಪ್ರಾಣವನ್ನು ಉಳಿಸಿಕೊಳ್ಳುವುದೇ ಶ್ರೇಷ್ಠವೆಂದು ನಾನು ಎಣಿಸುವುದಿಲ್ಲ; ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಸಾಕ್ಷ್ಯಪೂರಕವಾಗಿ ಸಾರುವ ನಿಯೋಗವನ್ನು ಕರ್ತನಾದ ಯೇಸುವಿನಿಂದ ನಾನು ಹೊಂದಿದ್ದೇನೆ ಈ ನಿಯೋಗವನ್ನು ಪೂರ್ಣಗೊಳಿಸುವುದೊಂದೇ ನನ್ನ ಅಪೇಕ್ಷೆಯಾಗಿದೆ.


ಆಕೆಯು, “ನಿನ್ನನ್ನು ಬಿಟ್ಟು ಹಿಂದಿರುಗಿ ಹೋಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು.


ಇವನು ನಿನಗೆ ನವಚೈತನ್ಯ ನೀಡಿ ಪುನರ್ಜನ್ಮ ಹೊಂದುವಂತೆ ಮಾಡುವನು, ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಕನಾಗಿರುವನು. ನಿನ್ನನ್ನು ಬಹಳವಾಗಿ ಪ್ರೀತಿಸುತ್ತಾ ಏಳು ಮಂದಿ ಮಕ್ಕಳಿಗಿಂತ ಹೆಚ್ಚಾಗಿ ನಿನ್ನನ್ನು ಪ್ರೀತಿಸಿ ಗೌರವಿಸುವ ನಿನ್ನ ಸೊಸೆಯು ಇವನನ್ನು ಹೆತ್ತಳಲ್ಲಾ” ಎಂದು ಹೇಳಿದರು.


ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದನು.


ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.


ಅದಕ್ಕೆ ಇತ್ತೈ, “ಯೆಹೋವನಾಣೆ, ನನ್ನ ಒಡೆಯನಾದ ಅರಸನ ಜೀವದಾಣೆ, ಪ್ರಾಣ ಹೋದರೂ, ಉಳಿದರೂ ನನ್ನ ಒಡೆಯನಾದ ಅರಸನು ಇರುವಲ್ಲೇ ಇರುವೆನು” ಎಂದು ಉತ್ತರಕೊಟ್ಟನು.


ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.


ಎಲೌ ರಾಜಕುಮಾರಿಯೇ, ನನ್ನ ಮಾತನ್ನು ಕೇಳಿ ಆಲೋಚಿಸು; ಸ್ವಜನರನ್ನೂ ತೌರಮನೆಯನ್ನೂ ಮರೆತುಬಿಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು