ರೂತಳು 1:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಸಿರಿವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಹಿಂತಿರುಗುವಂತೆ ಮಾಡಿದನು. ಯೆಹೋವನು ನನಗೆ ವಿರೋಧವಾಗಿದ್ದಾನೆ, ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಹೀಗಿರುವಾಗ ನೀವು ನನ್ನನ್ನು ನವೊಮಿಯೆಂದು ಕರೆಯುವುದು ಸರಿಯೇ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಭಾಗ್ಯವಂತಳಾಗಿ ಹೋದೆನು; ಯೆಹೋವನು ನನ್ನನ್ನು ಗತಿಹೀನಳನ್ನಾಗಿ ಬರಮಾಡಿದನು. ಯೆಹೋವನು ನನಗೆ ವಿರೋಧವಾಗಿ ಸಾಕ್ಷಿಹೇಳಿದ್ದಾನೆ; ಸರ್ವಶಕ್ತನು ನನ್ನನ್ನು ಬಾಧಿಸಿದ್ದಾನೆ. ಇದರಿಂದ ನೀವು ನನ್ನನ್ನು ನೊವೊವಿುಯೆಂದು ಕರೆಯುವದು ಹೇಗೆ ಅಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇಲ್ಲಿಂದ ಹೋಗುವಾಗ ಭಾಗ್ಯವಂತಳಾಗಿ ಹೋದೆನು; ಆದರೆ ಈಗ ಯೆಹೋವನು ನನ್ನನ್ನು ಬರಿಗೈಯಲ್ಲಿ ಮನೆಗೆ ಕರೆತಂದಿದ್ದಾನೆ. ಯೆಹೋವನು ನನ್ನನ್ನು ದುಃಖಿತಳನ್ನಾಗಿ ಮಾಡಿದ್ದಾನೆ. ಹೀಗಿರುವಾಗ ನೀವೇಕೆ ನನ್ನನ್ನು ‘ನೊವೊಮಿ’ ಎಂದು ಕರೆಯಬೇಕು? ಸರ್ವಶಕ್ತನಾದ ದೇವರು ನನಗೆ ಸಾಕಷ್ಟು ಕಷ್ಟ ಕೊಟ್ಟಿದ್ದಾನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು. ಅಧ್ಯಾಯವನ್ನು ನೋಡಿ |
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.