Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ, “ನೀವು ತಿರುಗಿ ನಿಮ್ಮ ನಿಮ್ಮ ತವರುಮನೆಗಳಿಗೆ ಹೋಗಿರಿ, ನೀವು ನನ್ನನ್ನೂ, ಮರಣಹೊಂದಿದ ನನ್ನ ಮಕ್ಕಳನ್ನು ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆತೋರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ತಿರಿಗಿ ನಿಮ್ಮ ನಿಮ್ಮ ತೌರಮನೆಗೆ ಹೋಗಿರಿ; ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ನೊವೊಮಿ ತನ್ನ ಸೊಸೆಯಂದಿರಿಗೆ, “ನೀವಿಬ್ಬರೂ ನಿಮ್ಮ ತಂದೆತಾಯಿಗಳ ಮನೆಗೆ ಹೋಗಿ. ನೀವು ನನ್ನನ್ನೂ ಸತ್ತುಹೋದ ನನ್ನ ಇಬ್ಬರು ಮಕ್ಕಳನ್ನೂ ತುಂಬ ಪ್ರೀತಿಯಿಂದ ನೋಡಿಕೊಂಡಿದ್ದೀರಿ. ಯೆಹೋವನು ನಿಮಗೆ ಅಷ್ಟೇ ಕೃಪೆಯನ್ನೂ ಪ್ರೀತಿಯನ್ನೂ ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 1:8
14 ತಿಳಿವುಗಳ ಹೋಲಿಕೆ  

ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು.


ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.


ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.


ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗುವ ದಾರಿಯಲ್ಲಿ ಹೋಗುತ್ತಿರುವಾಗ


ನೀವಿಬ್ಬರೂ ಮದುವೆಯಾಗಿ ಗಂಡನ ಮನೆಯಲ್ಲಿ ಸುಖವಾಗಿರುವಂತೆ ಯೆಹೋವನು ಅನುಗ್ರಹಿಸಲಿ” ಎಂದು ಹೇಳಿ ಅವರಿಗೆ ಮುದ್ದಿಟ್ಟಳು.


ಆಗ ಅವನು “ಮಗಳೇ, ಯೆಹೋವನಿಂದ ನಿನಗೆ ಆಶೀರ್ವಾದವಾಗಲಿ; ನೀನು ಬಡವರೂ ಅಥವಾ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ಹೋಗಲಿಲ್ಲ. ಈಗ ನಿನ್ನ ಪತಿಭಕ್ತಿಯು ಮೊದಲಗಿಂತ ವಿಶೇಷವಾಗಿ ಪ್ರತ್ಯಕ್ಷವಾಯಿತು.


ಯೆಹೋವನ ಒಡಂಬಡಿಕೆಯ ನಂಬಿಕೆ ಮತ್ತು ಸತ್ಯ ನಿಮ್ಮೊಂದಿಗಿರಲಿ. ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು