Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನವೊಮಿಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಬಹು ಧನವಂತನಾದ ಒಬ್ಬ ಸಂಬಂಧಿಕನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೊವೊವಿುಯ ಗಂಡನಾದ ಎಲೀಮೆಲೆಕನ ಗೋತ್ರದಲ್ಲಿ ಬೋವಜನೆಂಬ ಒಬ್ಬ ಧನವಂತನಾದ ಸಂಬಂಧಿಯಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬೆತ್ಲೆಹೇಮಿನಲ್ಲಿ ಬೋವಜನೆಂಬ ಒಬ್ಬ ಐಶ್ವರ್ಯವಂತನಿದ್ದನು. ಬೋವಜನು ಎಲೀಮೆಲೆಕನ ಕುಟುಂಬದವನಾಗಿದ್ದು ನೊವೊಮಿಯ ಸಮೀಪದ ಸಂಬಂಧಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನೊವೊಮಿಯ ಗಂಡ ಎಲೀಮೆಲೆಕನ ಗೋತ್ರದಲ್ಲಿ ಬೋವಜ ಎಂಬ ಹೆಸರುಳ್ಳ ಪ್ರಬಲ ಮತ್ತು ಧನವಂತನಾಗಿರುವ ಬಂಧುವಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:1
13 ತಿಳಿವುಗಳ ಹೋಲಿಕೆ  

ಸಲ್ಮೋನನು ಬೋವಜನನ್ನು ಪಡೆದನು; ಬೋವಜನು ಓಬೇದನನ್ನು ಪಡೆದನು;


ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.


ಈಗ ನೀನು ಯಾರ ಹೆಣ್ಣಾಳುಗಳ ಜೊತೆಯಲ್ಲಿರುತ್ತೀಯೋ ಆ ಬೋವಜನು ನಮ್ಮ ಸಂಬಂಧಿಕನಲ್ಲವೇ? ಅವನು ಈ ರಾತ್ರಿ ಕಣದಲ್ಲಿ ಜವೆಗೋದಿಯನ್ನು ತೂರುವನು.


ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.


ಆ ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ


ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;


ನನ್ನ ಆಸ್ತಿ ದೊಡ್ಡದೆಂದೂ, ನನ್ನ ಕೈಯೇ ಬಹು ಸಂಪತ್ತನ್ನು ಪಡೆಯಿತೆಂದೂ ಹೆಚ್ಚಳಪಟ್ಟಿದ್ದರೆ,


ಅವನಿಗೆ ಏಳು ಸಾವಿರ ಕುರಿಗಳೂ, ಮೂರು ಸಾವಿರ ಒಂಟೆಗಳೂ, ಐನೂರು ಜೋಡಿ ಎತ್ತುಗಳೂ, ಐನೂರು ಹೆಣ್ಣು ಕತ್ತೆಗಳೂ, ಬಹುಮಂದಿ ಸೇವಕರೂ ಇದ್ದುದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವತ್ತುಳ್ಳವನಾಗಿದ್ದನು.


ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.


ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು