Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ರೂತಳು ಅವನಿಗೆ ಸಾಷ್ಟಾಂಗನಮಸ್ಕಾರಮಾಡಿ - ಪರದೇಶಿಯಾದ ನನ್ನಲ್ಲಿ ಇಷ್ಟು ಕಟಾಕ್ಷವೇಕೆ ಅನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಗ ರೂತಳು ತಲೆಬಾಗಿ ವಂದಿಸಿದಳು. ಅವಳು ಬೋವಜನಿಗೆ, “ನನಗೆ ಆಶ್ಚರ್ಯವಾಗುತ್ತದೆ. ನಾನೊಬ್ಬ ಪರದೇಶಿಯಾಗಿದ್ದರೂ ನೀನು ನನ್ನನ್ನು ಗಮನಿಸಿ ಕೃಪೆ ತೋರಿದೆ” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:10
19 ತಿಳಿವುಗಳ ಹೋಲಿಕೆ  

ಅಬೀಗೈಲಳು ದಾವೀದನನ್ನು ಕಂಡ ಕೂಡಲೇ ಕತ್ತೆಯಿಂದಿಳಿದು, ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.


ಆಗ ಆಕೆಯು, “ಸ್ವಾಮೀ, ತಾವು ದಾಸಿಯಾದ ನನ್ನನ್ನು ಕಟಾಕ್ಷಿಸಿದ್ದೀರಿ; ನಾನು ತಮ್ಮ ದಾಸಿಯೆನಿಸಿಕೊಳ್ಳುವುದಕ್ಕೆ ಯೋಗ್ಯಳಲ್ಲದಿದ್ದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿಸಿದಿರಿ” ಅಂದಳು.


ಕ್ರೈಸ್ತ ಸಹೋದರರು ಅಣ್ಣ ತಮ್ಮಂದಿರೆಂದು ತಿಳಿದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಗೌರವಮರ್ಯಾದೆಗಳನ್ನು ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ಆತನು ತನ್ನ ದಾಸಿಯ ದೀನಸ್ಥಿತಿಯ ಮೇಲೆ ಲಕ್ಷ್ಯವಿಟ್ಟಿದ್ದಾನೆ. ಇಗೋ, ಇಂದಿನಿಂದ ತಲತಲಾಂತರದವರೆಗೆ ಎಲ್ಲರೂ ನನ್ನನ್ನು ಧನ್ಯಳೆಂದು ಹೊಗಳುವರು,


ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವಷ್ಟು ಸೌಭಾಗ್ಯ ನನಗೆ ಎಲ್ಲಿಂದಾಯಿತು?


ನನ್ನ ತಂದೆಯ ಮನೆಯವರೆಲ್ಲರೂ ಅರಸನಾದ ನನ್ನ ಒಡೆಯನ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ಅವನು ತನ್ನ ಸೇವಕನಾದ ನನ್ನನ್ನು ಭೋಜನಕ್ಕೆ ತನ್ನ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡನು. ಅರಸನಿಗೆ ಹೆಚ್ಚಾಗಿ ಮೊರೆಯಿಡುವುದಕ್ಕೆ ನಾನೇನು ಯೋಗ್ಯನೋ?” ಎಂದು ಉತ್ತರ ಕೊಟ್ಟನು.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ನೀನು ಕಟಾಕ್ಷಿಸಲು ನಿನ್ನ ದಾಸನಾದ ನಾನು ಎಷ್ಟರವನು?” ಎಂದು ಹೇಳಿದನು.


ನಾನು ಹಸಿದಿದ್ದೆನು, ನನಗೆ ಊಟ ಕೊಟ್ಟಿರಿ; ನಾನು ಬಾಯಾರಿದ್ದೆನು, ನನಗೆ ಕುಡಿಯುವುದಕ್ಕೆ ಕೊಟ್ಟಿರಿ; ಪರದೇಶಿಯಾಗಿದ್ದೆನು, ನನಗೆ ಆಶ್ರಯ ಕೊಟ್ಟಿರಿ;


ಮೋವಾಬ್ಯಳಾದ ರೂತಳು ನವೊಮಿಗೆ, “ನಾನು ಹೋಗಿ, ಹಕ್ಕಲ ತೆನೆಗಳನ್ನು ಆಯ್ದುಕೊಳ್ಳಲು ಅವಕಾಶ ಮಾಡಿಕೊಡುವವರ ಹೊಲದಿಂದ ತೆನೆಗಳನ್ನು ಸಂಗ್ರಹಿಸಿಕೊಂಡು ಬರುತ್ತೇನೆ” ಅಂದಳು. ಅದಕ್ಕೆ ನವೊಮಿ “ಹೋಗಿ ಬಾ ಮಗಳೆ” ಅಂದಳು.


ಹೇಗೆಂದರೆ, ಅಬ್ರಹಾಮನು ಕಣ್ಣೆತ್ತಿ ನೋಡಲು ಅವನೆದುರಿನಲ್ಲಿ ಮೂವರು ಪುರುಷರು ನಿಂತಿದ್ದರು. ಕೂಡಲೆ ಅವರನ್ನು ಎದುರುಗೊಳ್ಳುವುದಕ್ಕೆ ಅವನು ಗುಡಾರದ ಬಾಗಿಲಿನಿಂದ ಓಡಿ ಹೋಗಿ ತಲೆಬಾಗಿ ನಮಸ್ಕರಿಸಿ.


ನನ್ನ ಆಳುಗಳು ತೆನೆ ಕೊಯ್ಯುವುದಕ್ಕೋಸ್ಕರ ಯಾವ ಹೊಲಕ್ಕೆ ಹೋಗುತ್ತಾರೋ ಆ ಹೊಲಕ್ಕೆ ನೀನೂ ಹೋಗು. ನಿನ್ನನ್ನು ಯಾರೂ ಮುಟ್ಟಬಾರದೆಂದು ನನ್ನ ಸೇವಕರಿಗೆ ಅಪ್ಪಣೆಕೊಟ್ಟಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಸೇವಕರೇ ತುಂಬಿಸಿದ ನೀರಿನ ಪಾತ್ರೆಗಳಿಂದ ನೀರು ಕುಡಿಯಬಹುದು” ಎಂದು ಹೇಳಿದನು.


ಅದಕ್ಕೆ ಬೋವಜನು, “ನಿನ್ನ ಗಂಡನು ಮರಣ ಹೊಂದಿದ ದಿನದಿಂದ ನಿನ್ನ ಅತ್ತೆಗಾಗಿ ನೀನು ಮಾಡಿದ್ದೆಲ್ಲವೂ, ನನಗೆ ತಿಳಿದಿದೆ. ಹಾಗೂ ನಿನ್ನ ತಂದೆತಾಯಿಗಳನ್ನೂ, ಸ್ವದೇಶವನ್ನೂ ಬಿಟ್ಟು, ನಿನಗೆ ಅರಿಯದ ಜನರ ಬಳಿಗೆ ಬಂದಿರುವಿಯೆಂಬುದು ನನಗೆ ಚೆನ್ನಾಗಿ ಗೊತ್ತಿದೆ.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.


ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು