Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 2:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅತ್ತೆಯು “ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ” ಎನ್ನಲು ರೂತಳು ನಾನು ಹಕ್ಕಲಾಯ್ದ ಹೊಲದ ಯಜಮಾನನ ಹೆಸರು, ಬೋವಜನೆಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದನ್ನು ನೋಡಿ ನವೊಮಿ, “ನೀನು ಈ ದಿನ ಎಲ್ಲಿ ಹಕ್ಕಲಾಯ್ದೆ? ಯಾರ ಹೊಲದಲ್ಲಿ ಕೆಲಸಮಾಡಿದೆ? ನಿನಗೆ ದಯೆ ತೋರಿಸಿದವನಿಗೆ ಶುಭವಾಗಲಿ!” ಎಂದಳು. ಅದಕ್ಕೆ ರೂತಳು, “ನಾನು ತೆನೆ ಆಯ್ದುಕೊಂಡ ಹೊಲವು ಬೋವಜನದು,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅತ್ತೆಯು - ನೀನು ಈ ಹೊತ್ತು ಯಾರ ಹೊಲದಲ್ಲಿ ಹಕ್ಕಲಾಯ್ದಿ? ಎಲ್ಲಿ ಕೆಲಸ ಮಾಡಿದಿ? ನಿನ್ನನ್ನು ಕಟಾಕ್ಷಿಸಿದವನಿಗೆ ಶುಭವಾಗಲಿ ಎನ್ನಲು ರೂತಳು - ನಾನು ಯಾವನ ಹೊಲದಲ್ಲಿ ಹಕ್ಕಲಾಯ್ದೆನೋ ಅವನ ಹೆಸರು ಬೋವಜನೆಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವಳ ಅತ್ತೆಯು ಅವಳಿಗೆ, “ಈ ಧಾನ್ಯವನ್ನೆಲ್ಲಾ ನೀನು ಎಲ್ಲಿಂದ ಶೇಖರಿಸಿದೆ? ನೀನು ಎಲ್ಲಿ ಕೆಲಸ ಮಾಡಿದೆ? ನಿನಗೆ ಸಹಾಯ ಮಾಡಿದ ಮನುಷ್ಯನಿಗೆ ಶುಭವಾಗಲಿ” ಎಂದಳು. ಅದಕ್ಕೆ ರೂತಳು, “ನಾನು ಇಂದು ಯಾರ ಹತ್ತಿರ ಕೆಲಸ ಮಾಡಿದೆನೋ ಆ ಮನುಷ್ಯನ ಹೆಸರು ಬೋವಜ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ರೂತಳ ಅತ್ತೆಯು ಆಕೆಗೆ, “ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡೆ? ಎಲ್ಲಿ ಕೆಲಸಮಾಡಿದೆ? ನಿನ್ನನ್ನು ಪರಾಮರಿಸಿದವನಿಗೆ ಆಶೀರ್ವಾದವಾಗಲಿ,” ಎಂದಳು. ಅದಕ್ಕವಳು ತಾನು ಯಾರ ಹತ್ತಿರ ಕೆಲಸಮಾಡಿದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ, “ನಾನು ಈ ಹೊತ್ತು ಕೆಲಸ ಮಾಡಿದವನ ಹೆಸರು ಬೋವಜ,” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 2:19
6 ತಿಳಿವುಗಳ ಹೋಲಿಕೆ  

ದಿಕ್ಕಿಲ್ಲದವನನ್ನು ಪರಾಂಬರಿಸುವವನು ಧನ್ಯನು; ಯೆಹೋವನು ಅವನನ್ನು ಆಪತ್ಕಾಲದಲ್ಲಿ ರಕ್ಷಿಸುವನು.


ರೂತಳು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡಿ “ಪರದೇಶಿಯಾದ ನನ್ನ ಮೇಲೆ ಇಷ್ಟು ಕಟಾಕ್ಷವಿಟ್ಟು ದಯೆ ತೋರಿಸಲು ಕಾರಣವೇನು?” ಎಂದು ಕೇಳಿದಳು.


ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.


ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.


ಯೆಹೋವನು ಅವನ ಪ್ರಾಣವನ್ನು ಕಾಪಾಡಿ ಉಳಿಸುವನು; ಅವನು ದೇಶದಲ್ಲಿ ಧನ್ಯನೆನಿಸಿಕೊಳ್ಳುವನು; ಯೆಹೋವನು ಅವನನ್ನು ಶತ್ರುಗಳ ಅಧೀನಕ್ಕೆ ಕೊಡುವುದಿಲ್ಲ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು