Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ರೂತಳು 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಸಮೀಪಬಂಧುವೆಂಬುದು ನಿಜ; ಆದರೂ ನನಗಿಂತ ಸಮೀಪ ಬಂಧು ಒಬ್ಬನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಸಮೀಪ ಬಂಧುವೆಂಬದು ನಿಜ; ಆದರೂ ನನಗಿಂತ ಸಮೀಪನಾದವನು ಒಬ್ಬನಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನು ಹತ್ತಿರದ ಸಂಬಂಧಿ ಎಂಬುದು ನಿಜ. ಆದರೆ ನನಗಿಂತಲೂ ಹತ್ತಿರದ ಸಂಬಂಧಿ ಇನ್ನೊಬ್ಬನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಈಗ ನಾನು ನಿನ್ನ ವಿಮೋಚಿಸತಕ್ಕ ಸಮೀಪ ಬಂಧುವಾಗಿದ್ದೇನೆ ಎಂಬುದು ನಿಜವೇ. ಆದರೆ ನನಗಿಂತಲೂ ಸಮೀಪಸ್ಥನಾದ ಬಂಧುವು ಒಬ್ಬನಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ರೂತಳು 3:12
7 ತಿಳಿವುಗಳ ಹೋಲಿಕೆ  

ಬೋವಜನು ಊರಬಾಗಿಲಿನ ಬಳಿಗೆ ಹೋಗಿ ಅಲ್ಲಿ ಕುಳಿತುಕೊಂಡನು. ತಾನು ಹೇಳಿದ್ದ ಸಮೀಪಬಂಧುವು ಆ ಮಾರ್ಗವಾಗಿ ಹೋಗುತ್ತಿದ್ದುದನ್ನು ಕಂಡು, ಬೋವಜನು ಅವನಿಗೆ “ಬಾರಪ್ಪಾ, ಇಲ್ಲಿ ಬಂದು ಕುಳಿತುಕೋ” ಎಂದು ಕರೆಯಲು ಅವನು ಬಂದು ಕುಳಿತುಕೊಂಡನು.


ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಕೇಡು ಮಾಡಬಾರದು. ನಾವು ಮೊದಲೇ ತಿಳಿಸಿ, ನಿಮಗೆ ಖಂಡಿತವಾಗಿ ಹೇಳಿದ ಪ್ರಕಾರ ಇವೆಲ್ಲವುಗಳ ವಿಷಯದಲ್ಲಿ ಕರ್ತನು ಪ್ರತಿಕಾರ ಮಾಡುವವನಾಗಿದ್ದಾನೆ.


ಅಂತು ಜನರು ನಿಮಗೆ ಏನೇನು ಮಾಡಬೇಕೆಂದು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ. ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ತಾತ್ಪರ್ಯ ಇದೇ ಆಗಿದೆ.


ನನ್ನ ಮಗಳೇ, ಈಗ ಭಯಪಡಬೇಡ. ನೀನು ಗುಣವಂತೆಯೆಂಬುದು ಊರಿನವರಿಗೆಲ್ಲಾ ತಿಳಿದಿದೆ; ಆದ್ದರಿಂದ ನೀನು ಹೇಳಿದ್ದನ್ನೆಲ್ಲಾ ಮಾಡುವೆನು.


ಈ ರಾತ್ರಿ ಇಲ್ಲೇ ಇರು; ನಾಳೆ ಅವನು ಮೈದುನಧರ್ಮವನ್ನು ನೆರವೇರಿಸಿದರೆ ಸರಿ; ಇಲ್ಲವಾದರೆ ಯೆಹೋವನಾಣೆ, ನಾನೇ ಅದನ್ನು ನೆರವೇರಿಸುವೆನು. ಬೆಳಗಾಗುವ ತನಕ ಇಲ್ಲೇ ಮಲಗಿಕೋ” ಎಂದು ಹೇಳಿದನು.


ಆಗ ನವೊಮಿಯು “ಸತ್ತವರಿಗೂ, ಬದುಕುವವರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಯೆಹೋವನು ಆತನನ್ನು ಆಶೀರ್ವದಿಸಲಿ” ಎಂದು ಹರಸಿ, “ಆ ಮನುಷ್ಯನು ನಮಗೆ ಹತ್ತಿರದ ನೆಂಟ, ಪೋಷಿಸಬೇಕಾದವನು” ಎಂದು ರೂತಳಿಗೆ ತಿಳಿಸಿದಳು.


ನಾನು ನಿನಗೆ ಹೇಳಬೇಕೆಂದಿರುವುದೇನಂದರೆ ‘ನಿನಗೆ ಅದನ್ನು ಕೊಂಡುಕೊಳ್ಳುವ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಊರಿನ ಹಿರಿಯರ ಮುಂದೆಯೇ ಕೊಂಡುಕೋ.’ ಇಲ್ಲದಿದ್ದರೆ ನನಗೆ ತಿಳಿಸು; ಇದು ನನಗೆ ಗೊತ್ತಾಗಬೇಕು. ನೀನೂ, ನಿನ್ನ ತರುವಾಯ ನಾನೂ ಅಲ್ಲದೆ ಅದನ್ನು ಕೊಂಡುಕೊಳ್ಳತಕ್ಕ ಬಾಧ್ಯರು ಬೇರೆ ಯಾರೂ ಇಲ್ಲ” ಎಂದು ಹೇಳಲು ಅವನು “ನಾನೇ ಕೊಂಡುಕೊಳ್ಳುತ್ತೇನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು